ಮಸೂದ್ ಅಜರ್ ಗೆ ನಿರ್ಬಂಧ ವಿಧಿಸುವುದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಾತನಾಡಿರುವ ಫ್ರಾನ್ಸ್ ನ ವಿದೇಶಾಂಗ ಸಚಿವ ಜಿಯನ್ ಮಾರ್ಕ್ ಅಯ್ರೌಲ್ಟ್, ಚೀನಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಭಯೋತ್ಪಾದನೆ ವಿರುದ್ಧ ಹೋರಾಡಲು ಅಂತಾರಾಷ್ಟ್ರೀಯ ಸಮುದಾಯದ ಬೆಂಬಲ ಎಲ್ಲಾ ಕಡೆಗಳಲ್ಲೂ ಒಂದೇ ರೀತಿಯಲ್ಲಿರಬೇಕು ಎಂದು ಚೀನಾ ಹೆಸರು ಪ್ರಸ್ತಾಪಿಸದೇ ಹೇಳಿದ್ದಾರೆ.