ಜಾರ್ಜ್ ಹೆಚ್ ಡಬ್ಲ್ಯೂ ಬುಷ್(92) ಆಸ್ಪತ್ರೆಗೆ ದಾಖಲಾಗಿರುವುದನ್ನು ಅವರ ಕಚೇರಿ ಸಿಬ್ಬಂದಿ ದೃಢಪಡಿಸಿದ್ದು, ಅನಾರೋಗ್ಯಕ್ಕೀಡಾಗಲು ಕಾರಣವೇನು ಎಂಬುದನ್ನು ತಿಳಿಸದೇ ಆರೋಗ್ಯ ಸ್ಥಿರವಾಗಿದೆ ಎಂದಷ್ಟೇ ಮಾಹಿತಿ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಾಧ್ಯಮವೊಂದರ ವರದಿಯ ಪ್ರಕಾರ ಜಾರ್ಜ್ ಬುಷ್ ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.