ಕೆನಡಾ ಮಸೀದಿಯಲ್ಲಿ ಗುಂಡಿನ ದಾಳಿ: 5 ಸಾವು, ಹಲವರಿಗೆ ಗಾಯ

ಕೆನಡಾದ ಕ್ಯೂಬಿಕ್ ಸಿಟಿಯಲ್ಲಿರುವ ಮಸೀದಿಯೊಂದರಲ್ಲಿ ಅಪರಿಚಿತ ವ್ಯಕ್ತಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ...
ಘಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಗಳು
ಘಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಗಳು
Updated on: 

ಕ್ಯೂಬಿಕ್ ಸಿಟಿ: ಕೆನಡಾದ ಕ್ಯೂಬಿಕ್ ಸಿಟಿಯಲ್ಲಿರುವ ಮಸೀದಿಯೊಂದರಲ್ಲಿ ಅಪರಿಚಿತ ವ್ಯಕ್ತಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮಸೀದಿಯಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಮುಸುಧಾರಿಗಳಾಗಿ ಬಂದಿರುವ ಮೂವರು ವ್ಯಕ್ತಿಗಳು ಏಕಾಏಕಿ ಗುಂಡಿನ ದಾಳಿಯನ್ನು ನಡೆಸಿದ್ದಾರೆ, ಈ ವೇಳೆ ಸ್ಥಳದಲ್ಲಿಯೇ ಐದು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಪ್ರಕರಣ ಸಂಬಂಧ ಸ್ಥಳೀಯರು ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸರು ಈಗಾಗಲೆ ಇಬ್ಬರು ಶಂಕಿತರನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಸ್ತುತ ಗಾಯಾಗಳುಗಳು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳುಗಳ ಸಂಖ್ಯೆ ನಿಖರವಾಗಿ ತಿಳಿದುಬಂದಿಲ್ಲ, ಘಟನೆಗೆ ಇನ್ನೂ ಕಾರಣಗಳು ತಿಳಿದುಬಂದಿಲ್ಲ.

ಕೆನಡಾ ಪ್ರಧಾನಿ ಖಂಡನೆ

ಮಸೀದಿಗ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೆಯೊ ಖಂಡನೆ ವ್ಯಕ್ತಪಡಸಿದ್ದಾರೆ. ಮಸೀದಿ ಪೂಜೆ ಮತ್ತು ಆಶ್ರಯದ ತಾಣವಾಗಿದ್ದು, ಇಂತಹ ಮಸೀದಿ ಮೇಲೆ ದಾಳಿ ನಡೆಸಿರುವುದು ಖಂಡನೀಯ ಎಂದು ಹೇಳಿದ್ದಾರೆ.

ರಾಷ್ಟ್ರದ ಚೌಕಟ್ಟಿಗೆ ಮುಸ್ಲಿಂ ಕೆನಡಿಗರು ಪ್ರಮುಖರಾಗಿದ್ದು, ಇಂತಹ ಅವಿವೇಕಿತನದ ಕೃತ್ಯಗಳಿಗೆ ನಮ್ಮ ರಾಷ್ಟ್ರ ಹಾಗೂ ಸಮುದಾಯದಲ್ಲಿ ಯಾವುದೇ ಜಾಗವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com