ಯಶಸ್ವಿ ಭೇಟಿ ಭಾರತ-ಇಸ್ರೇಲ್ ಸಂಬಂಧಗಳಿಗೆ ಹೆಚ್ಚು ಶಕ್ತಿ ನೀಡಿದೆ: ನೆತನ್ಯಾಹುಗೆ ಧನ್ಯವಾದ ಹೇಳಿದ ಮೋದಿ

70 ವರ್ಷಗಳ ಬಳಿಕ ಭಾರತೀಯ ಪ್ರಧಾನಮಂತ್ರಿ ಭೇಟಿ ಎಂಬ ಹಿರಿಮೆಯೊಂದಿಗೆ ಜು.4ಕ್ಕೆ ಇಸ್ರೇಲ್ ಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ತಮ್ಮ 3 ದಿನಗಳ ಇಸ್ರೇಲ್ ಭೇಟಿಯನ್ನು ಯಶಸ್ವಿಯಾಗಿ ಮುಗಿಸಿ, ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಜರ್ಮನಿಯ...
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು
ಟೆಲ್ ಅವಿವ್: 70 ವರ್ಷಗಳ ಬಳಿಕ ಭಾರತೀಯ ಪ್ರಧಾನಮಂತ್ರಿ ಭೇಟಿ ಎಂಬ ಹಿರಿಮೆಯೊಂದಿಗೆ ಜು.4ಕ್ಕೆ ಇಸ್ರೇಲ್ ಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ತಮ್ಮ 3 ದಿನಗಳ ಇಸ್ರೇಲ್ ಭೇಟಿಯನ್ನು ಯಶಸ್ವಿಯಾಗಿ ಮುಗಿಸಿ, ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಜರ್ಮನಿಯ ಹ್ಯಾಮ್ ಬರ್ಗ್'ಗೆ ಭೇಟಿ ಶುಕ್ರವಾರ ಭೇಟಿ ನೀಡಿದ್ದಾರೆ. 
ಪ್ರಧಾನಿ ಮೋದಿಯವರ ಈ ಭೇಟಿಯ ಮೂರು ದಿನಗಳ ಕಾಲ ಅವರೊಂದಿಗೆ ಇದ್ದ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು, ಭಾರತದೆಡೆಗಿನ ತಮ್ಮ ಪ್ರೀತಿಯನ್ನು ಪ್ರದರ್ಶಿಸಿದರು. 
ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ನಿಲ್ದಾಣಕ್ಕೆ ಆಗಮಿಸಿದ್ದ ನೆತನ್ಯಾಹು, ಬೀಳ್ಕೊಡುಗೆ ವೇಳೆಯೂ ನಿಲ್ದಾಣಕ್ಕೆ ಆಗಮಿಸಿ ಮೋದಿ ಜೊತೆಗಿನ ತಮ್ಮ ಸ್ನೇಹವನ್ನು ಪ್ರದರ್ಶಿಸಿದರು. 
3 ದಿನಗಳ ಇಸ್ಲೇಲ್ ಯಶಸ್ವಿ ಭೇಟಿಯನ್ನು ಪೂರ್ಣಗೊಳಿಸಿದ ಪ್ರಧಾನಿ ಮೋದಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಇಸ್ಲೇಲ್ ಗೆ ವಿದಾಯದ ಸಂದೇಶವನ್ನು ರವಾನಿಸಿದ್ದಾರೆ. ತಮ್ಮ ಆತಿಥ್ಯಕ್ಕಾಗಿ ಇಸ್ರೇಲ್ ಜನತೆ ಮತ್ತು ಸರ್ಕಾರಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಯಶಸ್ವಿ ಭೇಟಿ ಭಾರತ ಮತ್ತು ಇಸ್ರೇಲ್ ಸಂಬಂಧಗಳಿಗೆ ಹೆಚ್ಚು ಶಕ್ತಿಯನ್ನು ನೀಡಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com