ಭಾರತದೊಂದಿಗೆ ರಕ್ಷಣಾ ಸಹಕಾರ ವೃದ್ಧಿ: 600 ಬಿಲಿಯನ್ ಡಾಲರ್ ಮೊತ್ತದ ಮಸೂದೆಗೆ ಅಮೆರಿಕಾ ಅಂಗೀಕಾರ!

ಭಾರತದೊಂದಿಗೆ ರಕ್ಷಣಾ ಸಹಕಾರ ವೃದ್ಧಿಗೊಳಿಸುವ ನಿಟ್ಟಿನಲ್ಲಿ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ 600 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಮಸೂದೆಯನ್ನು ಅಂಗೀಕರಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ವಾಷಿಂಗ್ ಟನ್: ಭಾರತದೊಂದಿಗೆ ರಕ್ಷಣಾ ಸಹಕಾರ ವೃದ್ಧಿಗೊಳಿಸುವ ನಿಟ್ಟಿನಲ್ಲಿ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ 600 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಮಸೂದೆಯನ್ನು ಅಂಗೀಕರಿಸಿದೆ. 
ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ ನಲ್ಲಿ ಭಾರತೀಯ-ಅಮೆರಿಕನ್ ಕಾಂಗ್ರೆಸ್ ಸದಸ್ಯರಾದ ಅಮಿ ಬೇರಾ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು, ಎನ್ ಡಿಎಎ-2018 ಮಸೂದೆಯನ್ನು ಅಂಗೀಕರಿಸಲಾಗಿದೆ. ಅಮೆರಿಕ ವಿಶ್ವದ ಅತ್ಯಂತ ಪುರಾತನ ಪ್ರಜಾಪ್ರಭುತ್ವವಾಗಿದ್ದು, ಭಾರತ ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವಾಗಿದೆ. 
ಉಭಯ ರಾಷ್ಟ್ರಗಳ ನಡುವೆ ರಕ್ಷಣಾ ಸಹಕಾರವನ್ನು ವೃದ್ಧಿಸುವ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸುವುದು ಅಗತ್ಯವಾಗಿದೆ. ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿರುವುದಕ್ಕೆ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ ಗೆ ಧನ್ಯವಾದ ತಿಳಿಸುತ್ತೇನೆ ಎಂದು ಬೇರಾ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com