ವಾಷಿಂಗ್ ಟನ್: ಭಾರತ-ಚೀನಾ ಗಡಿ ಪ್ರದೇಶಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ವಿವಾದವನ್ನು ಬಗೆಹರಿಸಿಕೊಳ್ಳಲು ಮಾತುಕತೆ ನಡೆಸುವಂತೆ ಅಮೆರಿಕ ಸಲಹೆ ನೀಡಿದೆ.
ಸಿಕ್ಕಿಂ ಗಡಿ ಪ್ರದೇಶದಲ್ಲಿ ಚೀನಾ-ಭಾರತದ ನಡುವೆ ವಿವಾದ ಉಂಟಾಗಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅಮೆರಿಕ, ಭಾರತ-ಚೀನಾ ನೇರ ಮಾತುಕತೆಗೆ ಉತ್ತೇಜಿಸುವುದಾಗಿ ಹೇಳಿದೆ.
ಅಮೆರಿಕ ಚೀನಾ-ಭಾರತದ ನಡುವೆ ಉಂಟಾಗಿರುವ ವಿವಾದದ ಬಗ್ಗೆ ಕಾಳಜಿ ಹೊಂದಿದೆ ಎಂದು ಅಮೆರಿಕದ ಸರ್ಕಾರಿ ವಕ್ತಾರರು ಮಾಧ್ಯಮಗಳಿಗೆ ಹೇಳಿದ್ದು, ಎರಡೂ
ರಾಷ್ಟ್ರಗಳು ನೇರ ಮಾತುಕತೆ ನಡೆಸುವುದನ್ನು ಅಮೆರಿಕ ಉತ್ತೇಜಿಸುತ್ತದೆ ಎಂದಿದ್ದಾರೆ.
ಇದೇ ವೇಳೆ ಪತ್ರಕರ್ತರು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಶ್ನೆ ಕೇಳಿದ್ದಕ್ಕೆ, ಭಾರತ-ಚೀನಾವನ್ನು ನೇರವಾಗಿ ಸಂಪರ್ಕಿಸುವಂತೆ ಅಮೆರಿಕ ಸರ್ಕಾರಿ ವಕ್ತಾರರು ಪತ್ರಕರ್ತರಿಗೆ ತಿಳಿಸಿದ್ದಾರೆ.