ಅಮೆರಿಕ ಸೇನೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರ ನೇಮಕಕ್ಕೆ ನಿಷೇಧ: ಡೊನಾಲ್ಡ್ ಟ್ರಂಪ್

ಸೇನೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಕಾರ್ಯನಿರ್ವಹಿಸುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬುಧವಾರ ನಿಷೇಧ ಹೇರಿದ್ದಾರೆ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಸೇನೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಕಾರ್ಯನಿರ್ವಹಿಸುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬುಧವಾರ ನಿಷೇಧ ಹೇರಿದ್ದಾರೆ. 
ಸಂಪ್ರದಾಯವಾದಿಗಳನ್ನು ಓಲೈಸುವ ನಿಟ್ಟಿನಲ್ಲಿ ಕೈಗೊಂಡಿರುವ ಟ್ರಂಪ್ ಅವರ ಈ ನಿರ್ಧಾರ ಮತ್ತೊಂದು ವಿವಾದ ಸೃಷ್ಟಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಸೇನೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ನಿಷೇಧ ಹೇರಿರುವ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ಜನರಲ್ ಗಳು ಮತ್ತು ಮಿಲಿಟರಿ ತಜ್ಞರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳನ್ನು ಅಮೆರಿಕ ಸೇನೆಯಲ್ಲಿ ನೇಮಿಸುವುದಕ್ಕೆ ಮತ್ತು ಕಾರ್ಯನಿರ್ವಹಿಸುವುದಕ್ಕೆ ನಿಷೇಧ ಹೇರಿದ್ದೇನೆ. ನಮ್ಮ ಸೇನೆ ನಿರ್ಣಾಯಕ ಮತ್ತು ಅಗಾಧ ಗೆಲುವಿನತ್ತ ಗಮನ ನೀಡಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ತಗಲುವ ಅಪಾರ ವೈದ್ಯಕೀಯ ವೆಚ್ಚವನ್ನು ಭರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com