ಪಾಕಿಸ್ತಾನ: ಶಭಜ್ ಷರೀಫ್ ಪುತ್ರನಿಗೆ ಪಂಜಾಬ್ ಮುಖ್ಯಮಂತ್ರಿ ಪಟ್ಟ ಸಾಧ್ಯತೆ

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧತೆ ನಡೆಸಿರುವ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ,...
ನವಾಜ್ ಷರೀಫ್  - ಶೆಭಜ್ ಷರೀಫ್
ನವಾಜ್ ಷರೀಫ್ - ಶೆಭಜ್ ಷರೀಫ್
ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧತೆ ನಡೆಸಿರುವ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ, ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಭಜ್ ಷರೀಫ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ಪುತ್ರ ಹಮಜ್ ಶಭಜ್ ಅವರನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ. 
ಮೂಲಗಳ ಪ್ರಕಾರ, ಪಾಕಿಸ್ತಾನದಲ್ಲಿ ಮುಂದಿನ ವರ್ಷ ಸಾಮಾನ್ಯ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನವಾಜ್ ಷರೀಫ್ ಅವರು ಪಂಜಾಬ್ ಪ್ರಾಂತ್ಯವನ್ನು ಪಿಎಂಎಲ್ ಎನ್ ಪಕ್ಷದ ನಿಯಂತ್ರಣದಲ್ಲಿ ಉಳಿಸಿಕೊಳ್ಳುವುದಕ್ಕಾಗಿ ಅವರ ಕುಟುಂಬದವರನ್ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಹಮಜ್ ಶೆಭಜ್ ಷರೀಫ್ ಅವರು ಈಗಾಗಲೇ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಶಭಜ್ ಅವರು ತಮ್ಮ ಪುತ್ರನನ್ನೇ ಮುಖ್ಯಮಂತ್ರಿ ಮಾಡಲು ಬಯಸಿದ್ದಾರೆ. ಆದರೆ ಈ ನವಾಜ್ ಷರೀಫ್ ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಪಂಜಾಬ್ ನ ಪಿಎಂಎಲ್ ಎನ್ ಹಿರಿಯ ನಾಯಕರೊಬ್ಬರು ಹೇಳಿರುವುದಾಗಿ ಡಾನ್ ನ್ಯೂಸ್ ವರದಿ ಮಾಡಿದೆ.
ಅಕ್ರಮ ಆಸ್ತಿ ಹಾಗೂ ಭ್ರಷ್ಟಾಚಾರ ಪ್ರಕರಣದಲ್ಲಿ ನವಾಜ್ ಷರೀಫ್ ಅವರು ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈಗಾಗಲೇ ಪ್ರಧಾನಿ ಸ್ಥಾನಕ್ಕೆ ಷರೀಫ್ ರಾಜಿನಾಮೆ ನೀಡಿದ್ದಾರೆ. ಅವರ ಸ್ಥಾನಕ್ಕೆ ಶೆಭಜ್ ಷರೀಪ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com