ಹವಾಮಾನ ಬದಲಾವಣೆ ವಿರುದ್ಧದ ಹೋರಾಟದಲ್ಲಿ ಭಾರತ ಮುಂಚೂಣಿಯಲ್ಲಿದೆ: ವಿಶ್ವಸಂಸ್ಥೆ

ಹವಾಮಾನ ಬದಲಾವಣೆ ವಿರುದ್ಧದ ಹೋರಾಟದಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ವಿಶ್ವಸಂಸ್ಥೆಯ ಪರಿಸರ ವಿಭಾಗದ ಮುಖ್ಯಸ್ಥರು ಹೇಳಿದ್ದಾರೆ.
ವಿಶ್ವಸಂಸ್ಥೆ
ವಿಶ್ವಸಂಸ್ಥೆ
ನವದೆಹಲಿ: ಹವಾಮಾನ ಬದಲಾವಣೆ ವಿರುದ್ಧದ ಹೋರಾಟದಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ವಿಶ್ವಸಂಸ್ಥೆಯ ಪರಿಸರ ವಿಭಾಗದ ಮುಖ್ಯಸ್ಥರು ಹೇಳಿದ್ದಾರೆ. 
 ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿಯುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಬೆನ್ನಲ್ಲೇ ವಿಶ್ವಸಂಸ್ಥೆ ಪರಿಸರ ವಿಭಾಗದ ಮುಖ್ಯಸ್ಥರು ಪ್ರತಿಕ್ರಿಯೆ ನೀಡಿದ್ದು, " ಭಾರತ, ಚೀನಾ ಈಗಾಗಲೇ ಹವಾಮಾನ ಬದಲಾವಣೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿವೆ. ಅಮೆರಿಕಾ ಒಪ್ಪಂದದಿಂದ ಹಿಂದೆಸರಿದ ಮಾತ್ರಕ್ಕೆ ಜಾಗತಿಕವಾಗಿ ನಡೆಯುತ್ತಿರುವ ಯತ್ನಗಳನ್ನು ತಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಯುಎನ್ಇಪಿ ನಿರ್ದೇಶಕ ಎರಿಕ್ ಸೋಲ್ಹೀಮ್ ಹೇಳಿದ್ದಾರೆ. 
ಹವಾಮಾನ ಬದಲಾವಣೆ ತಡೆಗಟ್ಟುವ ಹಿಂದಿನ ವಿಜ್ಞಾನ ಸ್ಪಷ್ಟವಾಗಿದೆ, ಹವಾಮಾನ ಬದಲಾವಣೆ ಜಾಗತಿಕ ಸವಾಲಾಗಿರುವುದರಿಂದ ಈ ನಿಟ್ಟಿನಲ್ಲಿ ಹೆಚ್ಚು ಕೆಲಸಗಳಾಗಬೇಕಿದೆ ಎಂದು ಎರಿಕ್ ಸೋಲ್ಹೀಮ್ ಹೇಳಿದ್ದಾರೆ. ಒಪ್ಪಂದದಿಂದ ದೂರ ಸರಿಯುವ ಅಮೆರಿಕಾದ ನಿರ್ಧಾರದಿಂದ ಅವಿರತ ಪ್ರಯತ್ನಕ್ಕೆ ತಡೆಯೊಡ್ಡಲು ಸಾಧ್ಯವಿಲ್ಲ. ಭಾರತ, ಚೀನಾ ಈಗಾಗಲೇ ಇದಕ್ಕೆ ಮುಂದಾಳತ್ವ ವಹಿಸಿವೆ. ಯುರೋಪಿಯನ್ ಯೂನಿಯನ್ ಸೇರಿದಂತೆ 190 ರಾಷ್ಟ್ರಗಳು ಸಹ ಹವಾಮಾನ ಬದಲಾವಣೆ ವಿರುದ್ಧದ ಹೋರಾಟದಲ್ಲಿ ಆಸಕ್ತಿ ತೋರಿವೆ ಎಂದು ಸೋಲ್ಹೀಮ್ ತಿಳಿಸಿದ್ದಾರೆ. 
ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಕ್ಕೆ ವ್ಯಾಪಕ ಟೀಕೆ ಎದುರಾಗಿತ್ತು. ಈಗ ವಿಶ್ವಸಂಸ್ಥೆ ಸಹ ಟ್ರಂಪ್ ನಿರ್ಧಾರವನ್ನು ಗಂಭೀರವಾಗಿ ಪರಿಗಣಿಸದೇ, ಹವಾಮಾನ ಬದಲಾವಣೆ ವಿರುದ್ಧದ ಹೋರಾಟದಲ್ಲಿ ಈಗಾಗಲೇ ಭಾರತ, ಚೀನಾ ಮುಂಚೂಣಿಯಲ್ಲಿದೆ ಎಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com