ಅಮೆರಿಕಾಗೆ ಭಾರತ ಪ್ರಮುಖ ರಕ್ಷಣಾ ಪಾಲುದಾರ ರಾಷ್ಟ್ರ: ರಕ್ಷಣಾ ಕಾರ್ಯದರ್ಶಿ ಜೇಮ್ಸ್

ಭಾರತ ಅಮೆರಿಕಾಗೆ ಪ್ರಮುಖ ರಕ್ಷಣಾ ಪಾಲುದಾರ ರಾಷ್ಟ್ರ ಎಂದು ಅಮೆರಿಕ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಹೇಳಿದ್ದಾರೆ.
ಯುಎಸ್ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್
ಯುಎಸ್ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್
Updated on
ವಾಷಿಂಗ್ ಟನ್: ಭಾರತ ಅಮೆರಿಕಾಗೆ ಪ್ರಮುಖ ರಕ್ಷಣಾ ಪಾಲುದಾರ ರಾಷ್ಟ್ರ ಎಂದು ಅಮೆರಿಕ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಹೇಳಿದ್ದಾರೆ. 
ಹಿಂದೂ ಮಹಾಸಾಗರದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ನವದೆಹಲಿಯ ಪಾತ್ರವನ್ನು ಅಮೆರಿಕ ಗೌರವಿಸಲಿದೆ ಎಂದು ಜೇಮ್ಸ್ ಮ್ಯಾಟಿಸ್ ತಿಳಿಸಿದ್ದಾರೆ. ಆಗ್ನೇಯ ಏಷ್ಯಾ ಭಾಗದಲ್ಲಿ ಭಯೋತ್ಪಾದನೆ ಹರಡುವಿಕೆಯನ್ನು ತಡೆಗಟ್ಟುವುದಕ್ಕೆ ಅಮೆರಿಕಾ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದೆ. 
ಭಾರತವನ್ನು ನಾವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವೆಂದು ಗುರುತಿಸುತ್ತೇವೆ ಹಾಗೆಯೇ ಭಾರತ ಅಮೆರಿಕಾಗೆ ಪ್ರಮುಖ ರಕ್ಷಣಾ ಪಾಲುದಾರ ರಾಷ್ಟ್ರವೂ ಹೌದಾಗಿದ್ದು, ಹಿಂದೂ ಮಹಾಸಾಗರದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಭಾರತ ನೆರವಾಗಲಿದೆ ಎಂದು ಜೇಮ್ಸ್ ಮ್ಯಾಟಿಸ್ ತಿಳಿಸಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com