ಕತಾರ್ ನ್ನು ಒಂಟಿಯಾಗಿಸುವುದು ಭಯೋತ್ಪಾದನೆಯ ಅಂತ್ಯದ ಆರಂಭ: ಟ್ರಂಪ್

ಕತಾರ್ ನ್ನು ಒಂಟಿಯಾಗಿಸುವುದು ಭಯೋತ್ಪಾದನೆಯ ಅಂತ್ಯದ ಆರಂಭ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಡೋನಾಲ್ಡ್ ಟ್ರಂಪ್
ಡೋನಾಲ್ಡ್ ಟ್ರಂಪ್
ವಾಷಿಂಗ್ ಟನ್: ಕತಾರ್ ನ್ನು ಒಂಟಿಯಾಗಿಸುವುದು ಭಯೋತ್ಪಾದನೆಯ ಅಂತ್ಯದ ಆರಂಭ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಸೌದಿ ಅರೇಬಿಯಾ ಹಾಗೂ ಈಜಿಪ್ಟ್ ಸೇರಿದಂತೆ ಅರಬ್ ರಾಷ್ಟ್ರಗಳು ಕತಾರ್ ವಿರುದ್ಧ ಭಯೋತ್ಪಾದನೆಯ ಆರೋಪ ಹೊರಿಸಿದ್ದು, ಕತಾರ್ ನೊಂದಿಗಿನ ಎಲ್ಲಾ ರೀತಿಯ ರಾಜತಾಂತ್ರಿಕ ಸಂಬಂಧಗಳನ್ನು ರದ್ದುಗೊಳಿಸಿಕೊಂಡಿವೆ. ಈ ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಕತಾರ್ ನ್ನು ಒಂಟಿಯಾಗಿಸುವುದು ಭಯೋತ್ಪಾದನೆಯ ಅಂತ್ಯದ ಆರಂಭ ಎಂದು ಹೇಳಿದ್ದಾರೆ. 
ಅಮೆರಿಕಾ ಸೇರಿದಂತೆ ರಾಜತಾಂತ್ರಿಕ ಸಂಬಂಧಗಳನ್ನು ರದ್ದುಗೊಳಿಸಿರುವ ರಾಷ್ಟ್ರಗಳ ಆರೋಪದ ಬಗ್ಗೆ ಕತಾರ್ ಆಕ್ರೋಶ ಭರಿತ ಪ್ರತಿಕ್ರಿಯೆ ನೀಡಿದ್ದು, ಕತಾರ್ ಮೇಲೆ ಹಿಡಿತ ಸಾಧಿಸುವ ಯತ್ನ ಇದಾಗಿದೆ ಎಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com