ಕಾಶ್ಮೀರ ಕುರಿತು ಭಾರತ-ಪಾಕ್ ಮಧ್ಯೆ ಮಾತುಕತೆ ಪುನಾರಂಭಕ್ಕೆ ಯತ್ನ: ವಿಶ್ವಸಂಸ್ಥೆ ಮುಖ್ಯಸ್ಥ

ಕಾಶ್ಮೀರ ವಿವಾದವನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ಪ್ರಧಾನ ಮಂತ್ರಿಗಳನ್ನು....
ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರ್ರಸ್
ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರ್ರಸ್
Updated on: 
ಯುನೈಟೆಡ್ ನೇಶನ್: ಕಾಶ್ಮೀರ ವಿವಾದವನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ಪ್ರಧಾನ ಮಂತ್ರಿಗಳನ್ನು ಕರೆಸಿ ಮಾತುಕತೆ ನಡೆಸಲು ಪ್ರಯತ್ನಿಸುವುದಾಗಿ ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರ್ರಸ್ ತಿಳಿಸಿದ್ದಾರೆ.
ಕಾಶ್ಮೀರ ವಿವಾದವನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನ ನಡುವೆ ಮಾತುಕತೆ ತರಲು ಪ್ರಯತ್ನಿಸುತ್ತಿದ್ದೀರಾ ಎಂದು ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರು ಪ್ರಶ್ನಿಸಿದಾಗ, ಪಾಕಿಸ್ತಾನದ ಪ್ರಧಾನಿಯವರನ್ನು ಮೂರು ಬಾರಿ ಮತ್ತು ಭಾರತದ ಪ್ರಧಾನಿಯವರನ್ನು ಎರಡು ಬಾರಿ ಭೇಟಿಯಾಗಿದ್ದು ಏಕೆ ಎಂದು ನೀವು ಭಾವಿಸಿದ್ದೀರಿ ಎಂದು ನಗುತ್ತಾ ಪ್ರಶ್ನಿಸಿದರು.
 ಭಾರತ ಮತ್ತು ಪಾಕಿಸ್ತಾನ ಮಧ್ಯೆ ಕಾಶ್ಮೀರ ವಿವಾದವನ್ನು ತಣ್ಣಗಾಗಿಸಲು ಪ್ರಯತ್ನಿಸುತ್ತಿದ್ದೇನೆ ಎಂದು ಪ್ರಧಾನ ಕಾರ್ಯದರ್ಶಿ ಹೇಳಿದರು.
ಕಳೆದ ಜನವರಿಯಲ್ಲಿ ವಿಶ್ವಸಂಸ್ಥೆ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರನ್ನುದ್ದೇಶಿಸಿ ಮೊದಲ ಪತ್ರಿಕಾಗೋಷ್ಠಿ ನಡೆಸುತ್ತಿದ್ದು, ಭಾರತ ಮತ್ತು ಪಾಕಿಸ್ತಾನ ಮಧ್ಯೆ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆಯಿಂದ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಆದರೆ ಕಾಶ್ಮೀರ ವಿವಾದ ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನ ಮಧ್ಯೆ ಮಧ್ಯವರ್ತಿಯಾಗುವ ಬಗ್ಗೆ ಅವರು ಯಾವುದೇ ಸೂಚನೆ ನೀಡಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com