ಪಾಕ್ ಸೇನಾ ಮುಖ್ಯಸ್ಥರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ ಕುಲಭೂಷಣ್ ಜಾಧವ್

ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್....
ಕುಲಭೂಷಣ್ ಜಾಧವ್
ಕುಲಭೂಷಣ್ ಜಾಧವ್
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರು ಕ್ಷಮಾದಾನ ಕೋರಿ ಪಾಕ್ ಸೇನಾ ಮುಖ್ಯಸ್ಥರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಗುರುವಾರ ಸೇನೆ ತಿಳಿಸಿದೆ.
ಈ ಸಂಬಂಧ ಆಂತರಿಕ ಸೇವೆ ಸಾರ್ವಜನಿಕ ಸಂಬಂಧ(ಐಎಸ್ ಪಿಆರ್) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಜಾಧವ್ ಅವರು ತಮ್ಮ ಅರ್ಜಿಯಲ್ಲಿ ಪಾಕಿಸ್ತಾನದಲ್ಲಿ ಗೂಢಾಚಾರಿಕೆ ನಡೆಸಿದ ಬಗ್ಗೆ ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ತಪ್ಪೊಪ್ಪಿಕೊಂಡಿರುವುದಾಗಿ ತಿಳಿಸಿದೆ.
ಸಹಾನುಭೂತಿಯ ಆಧಾರದ ಮೇಲೆ ತನ್ನ ತಪ್ಪಿಗೆ ಕ್ಷಮೆ ನೀಡುವಂತೆ ಕೋರಿ ಜಾಧವ್ ಅವರು ಪಾಕ್ ಸೇನಾ ಮುಖ್ಯಸ್ಥರಿಗೆ ಮನವಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ ಈ ಹಿಂದೆ ಕ್ಷಮಾಧಾನ ಕೋರಿ ಜಾಧವ್ ಅವರು ಪಾಕ್ ಸೇನಾ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದೆ.
ಪಾಕಿಸ್ತಾನದ ಕಾನೂನು ಪ್ರಕಾರ, ಜಾಧವ್ ಅವರು ಪಾಕ್ ಸೇನಾ ಮುಖ್ಯಸ್ಥರಿಗೆ ಕ್ಷಮಾಧಾನ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಒಂದು ಸೇನಾ ಮುಖ್ಯಸ್ಥರೂ ಅರ್ಜಿ ವಜಾಗೊಳಿಸಿದರೆ ಹಾಗಾ ಭಾರತೀಯ ಮಾಜಿ ನೌಕಾಪಡೆ ಅಧಿಕಾರಿ ಪಾಕಿಸ್ತಾನ ಅಧ್ಯಕ್ಷರಿಗೆ ಮನವಿ ಸಲ್ಲಿಸಬಹುದಾಗಿದೆ. 
ಇದೇ ವೇಳೆ ಪಾಕಿಸ್ತಾನ ಸೇನೆ ಜಾಧವ್ ತಪ್ಪೊಪ್ಪಿಗೆ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಜಾಧವ್ ಭಯೋತ್ಪಾದನೆ ಮತ್ತು ಬೇಹುಗಾರಿಕೆ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ.
ಗೂಢಚಾರಿಕೆ ನಡೆಸಿದ ಆರೋಪದ ಮೇಲೆ ಪಾಕಿಸ್ತಾನ ಸೇನಾ ಕೋರ್ಟ್ ಕುಲಭೂಷಣ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ನೀಡಿದ್ದು, ಅದಕ್ಕೆ ಅಂತರಾಷ್ಟ್ರೀಯ ಕೋರ್ಟ್ ತಡೆಯಾಜ್ಞೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com