ಸ್ಕರ್ಟ್ಸ್ ಧರಿಸಿ ತರಗತಿಗಳಿಗೆ ಹಾಜರಾಗುವುದರ ಮೂಲಕ ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿಯ ಸಮವಸ್ತ್ರ ನೀತಿಯ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಬಿಸಿ ಹವೆ ಇರುವುದರಿಂದ ವಿದ್ಯಾರ್ಥಿಗಳಿಗೆ ಶಾರ್ಟ್ಸ್ ಧರಿಸಿ ಬರಲು ಅನುಮತಿ ನೀಡುವಂತೆ ವಿದ್ಯಾರ್ಥಿಗಳ ಪೋಷಕರು ಕೇಳಿದ್ದರು. ಆದರೆ ಶಾಲೆಯ ಮುಖ್ಯ ಶಿಕ್ಷಕರು ತಾಪಮಾನ ಹೆಚ್ಚಾಗಿದ್ದರೂ ಶಾರ್ಟ್ಸ್ ಧರಿಸಿ ಬರುವಂತಿಲ್ಲ, ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದ್ದೇ ಆದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಇರಿಸಲಾಗುವುದು ಎಂದು ಹೇಳಿದ್ದರು. ಅಷ್ಟೇ ಅಲ್ಲದೇ ವ್ಯಂಗ್ಯ ಧಾಟಿಯಲ್ಲಿ ತಾಪಮಾನವನ್ನು ತಡೆಯಲು ಸಾಧ್ಯವಾಗದೇ ಇದ್ದರೆ ಸ್ಕರ್ಟ್ ಧರಿಸಿ ಬರಲಿ ಎಂದೂ ಹೇಳಿದ್ದಾಗಿ ಪೋಷಕರೊಬ್ಬರು ಅಲ್ಲಿನ ಮಾಧ್ಯಮಕ್ಕೆ ಹೇಳಿದ್ದಾರೆ.