ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದಕ್ಷಿಣ ಚೀನಾ ಸಮುದ್ರದ ವಿಷಯ ಪ್ರಸ್ತಾಪವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಚೀನಾದ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಚೀನಾ ಹಾಗೂ ಇತರ ಏಷ್ಯಾ ರಾಷ್ಟ್ರಗಳ ಶ್ರಮದಿಂದ ದಕ್ಷಿಣ ಚೀನಾ ಸಮುದ್ರದಲ್ಲಿ ಶಾಂತಿಯ ವಾತಾವರಣ ಉಂಟಾಗುತ್ತಿದೆ. ಈ ಹಂತದಲ್ಲಿ ಅಮೆರಿಕ ಮತ್ತು ಭಾರತ ಶಾಂತಿ ಭಂಗ ಮಾಡುವುದಿಲ್ಲ ಎಂಬ ಭರವಸೆ ಇದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ,