ಪಾಕಿಸ್ತಾನದಲ್ಲಿ ಅವಳಿ ಬಾಂಬ್ ಸ್ಫೋಟ: 18 ಸಾವು

ಪಾಕಿಸ್ತಾನದಲ್ಲಿ ಅವಳಿ ಬಾಂಬ್ ಸ್ಫೋಟ ನಡೆದಿದ್ದು ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ...
ಬಾಂಬ್ ಸ್ಫೋಟ
ಬಾಂಬ್ ಸ್ಫೋಟ
ಪರಚಿನಾರ್: ಪಾಕಿಸ್ತಾನದಲ್ಲಿ ಅವಳಿ ಬಾಂಬ್ ಸ್ಫೋಟ ನಡೆದಿದ್ದು ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. 
ಶಿಯಾ ಸಮುದಾಯದವರು ಹೆಚ್ಚು ಪ್ರಾಬಲ್ಯ ಹೊಂದಿರುವ ಪರಚಿನಾರ್ ನ ಮಾರ್ಕೆಟ್ ಮತ್ತು ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. 
ಇನ್ನು ಸ್ಫೋಟದಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ಫೋಟದ ಹೊಣೆಯನ್ನು ಇನ್ನು ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com