ಸಾಂದರ್ಭಿಕ ಚಿತ್ರ
ವಿದೇಶ
ಪಾಕಿಸ್ತಾನದಲ್ಲಿ ಮೂವರು ಉಗ್ರರ ಹತ್ಯೆ
ಪಾಕಿಸ್ತಾನದ ಖೈಬರ್ ಫಕ್ತುಂಖ್ವಾ ಪ್ರಾಂತ್ಯದ ಶನಿವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ....
ಪೇಶಾವರ: ಪಾಕಿಸ್ತಾನದ ಖೈಬರ್ ಫಕ್ತುಂಖ್ವಾ ಪ್ರಾಂತ್ಯದ ಶನಿವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ರಿಂಗ್ ನಾಯಕ ಸೇರಿದಂತೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಪೇಶಾವರ ಜಿಲ್ಲೆಯಲ್ಲಿ ಗಂಟೆಗಳ ಕಾಲ ನಡೆದ ಗುಂಡಿನ ಕಾಳದಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ.
ಈ ಮುಂಚೆ ಫ್ಲೋರ್ ಮಿಲ್ ಇದ್ದ ಕಟ್ಟದಲ್ಲಿ ಅವಿತುಕೊಂಡಿದ್ದ ಉಗ್ರರನ್ನು ಸುತ್ತುವರಿದ ಪೊಲೀಸರು, ಶರಣಾಗುವಂತೆ ಉಗ್ರರಿಗೆ ಸೂಚಿಸಿದ್ದಾರೆ. ಆದರೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿದ ಉಗ್ರರನ್ನು ಹೊಡೆದುರಳಿಸಲಾಗಿದೆ.
ನಾಲ್ವರ ಉಗ್ರರ ಪೈಕಿ ಮೂವರನ್ನು ಪೊಲೀಸರು ಹತ್ಯೆ ಮಾಡಿದ್ದು, ಮತ್ತೊರ್ವನನ್ನು ಜೀವಂತವಾಗಿ ಬಂಧಿಸಿದ್ದಾರೆ. ಬಂಧಿತ ಉಗ್ರನಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ