ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗೆ ವಿಶ್ವಸಂಸ್ಥೆ ಮುಖ್ಯಸ್ಥರ ಖಂಡನೆ

ಪಾಕಿಸ್ತಾನದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯನ್ನು ವಿಶ್ವಸಂಸ್ಥೆ ಮುಖ್ಯಸ್ಥರು ಖಂಡಿಸಿದ್ದಾರೆ.
ಬಾಂಬ್ ಸ್ಫೋಟ(ಸಂಗ್ರಹ ಚಿತ್ರ)
ಬಾಂಬ್ ಸ್ಫೋಟ(ಸಂಗ್ರಹ ಚಿತ್ರ)
ಯುನೈಟೆಡ್ ನೇಷನ್ಸ್: ಪಾಕಿಸ್ತಾನದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯನ್ನು ವಿಶ್ವಸಂಸ್ಥೆ ಮುಖ್ಯಸ್ಥರು ಖಂಡಿಸಿದ್ದಾರೆ. 
ಭಯೋತ್ಪಾದಕ ದಾಳಿಯನ್ನು ನಡೆಸಿದವರಿಗೆ ನ್ಯಾಯಾಂಗದಡಿ ಕಠಿಣ ಶಿಕ್ಷೆ ವಿಧಿಸಬೇಕೆಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸ್‌ ಕರೆ ನೀಡಿದ್ದಾರೆ. ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಗುಟೆರಸ್ ಸಾಂತ್ವನ ಹೇಳಿದ್ದು, ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. 
ಜೂ.23 ರಂದು ಪಾಕಿಸ್ತಾನದ ಪ್ಯಾರಾಚಾರ್ನರ್ ನಲ್ಲಿ ಬಾಂಬ್ ಸ್ಫೋಟಗೊಂಡಿದ್ದರ ಪರಿಣಾಮ 25 ಜನರು ಸಾವನ್ನಪ್ಪಿದ್ದರು. 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com