ಪಾಕ್‌ನಲ್ಲಿ ತೈಲ ಟ್ಯಾಂಕರ್ ಪಲ್ಟಿ: ತೈಲ ತುಂಬಿಕೊಳ್ಳಲು ಜನ ಮುಗಿಬಿದ್ದಾಗ ಸ್ಫೋಟ, 123 ಸಾವು

ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ವೊಂದು ಪಲ್ಟಿಯಾಗಿದ್ದು ತೈಲ ತುಂಬಿಸಿಕೊಳ್ಳಲು ಜನ ಮುಗಿಬಿದ್ದಾಗ ಟ್ಯಾಂಕರ್ ಗೆ ಬೆಂಕಿ ತಗುಲಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬಹಾವಾಲ್ಪುರ್(ಪಾಕಿಸ್ತಾನ): ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ವೊಂದು ಪಲ್ಟಿಯಾಗಿದ್ದು ತೈಲ ತುಂಬಿಸಿಕೊಳ್ಳಲು ಜನ ಮುಗಿಬಿದ್ದಾಗ ಟ್ಯಾಂಕರ್ ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ 123 ಜನ ಸಜೀವ ದಹನವಾಗಿದ್ದಾರೆ. 
ಪಾಕಿಸ್ತಾನ ಪಂಜಾಬ್ ಪ್ರಾಂತ್ಯದ ಬಹವಲ್ವುರ ಸಮೀಪದ ಹೆದ್ದಾರಿಯಲ್ಲಿ ಈ ಅನಾಹುತ ಸಂಭವಿಸಿದೆ. ಈ ಅವಗಡದಲ್ಲಿ 123 ಜನ ಸ್ಥಳದಲ್ಲೇ ಸಜೀವವಾಗಿ ದಹನವಾಗಿದ್ದು 75ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. 
ತೈಲ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಇಂಧನ ಸೋರಿಕೆಯಾಗುತ್ತಿತ್ತು. ಈ ವಿಷಯ ತಿಳಿದ ಸ್ಥಳೀಯರು ಸೋರಿಕೆಯಾಗುತ್ತಿರುವ ಇಂಧನ ತುಂಬಿಕೊಳ್ಳಲು ಟ್ಯಾಂಕರ್ ನ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡಿದ್ದು ಈ ವೇಳೆ ಟ್ಯಾಂಕರ್ ಗೆ ಬೆಂಕಿ ತಲುಗಿ ಅದು ಸ್ಫೋಟಗೊಂಡಿದೆ. 
ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇನ್ನು ಗಾಯಾಳುಗಳನ್ನು ಬಹಾವಾಲ್ಪುರ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com