ನಾನು ಮತ್ತು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವ ನಾಯಕರು: ಟ್ರಂಪ್

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ನಾನು ಸಾಮಾಜಿಕ ಜಾಲತಾಣಗಳಲ್ಲಿ ಜಾಗತಿಕ ನಾಯಕರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
Updated on
ವಾಷಿಂಗ್ ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ನಾನು ಸಾಮಾಜಿಕ ಜಾಲತಾಣಗಳಲ್ಲಿ ಜಾಗತಿಕ ನಾಯಕರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 
ಶ್ವೇತ ಭವನದ ರೋಸ್ ಗಾರ್ಡನ್ ನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವೇಳೆ ಟ್ರಂಪ್ ಈ ಹೇಳಿಕೆ ನೀಡಿದ್ದು, ನಾನು ಮತ್ತು ಪ್ರಧಾನಿ ನರೇಂದ್ರ ಮೋದಿ ಇಬ್ಬರೂ ಜಾಗತಿಕ ನಾಯಕರು ಎಂದು ಅಮೆರಿಕಾದ ಜನತೆಗೆ, ಮಾಧ್ಯಮಗಳಿಗೆ, ಭಾರತದ ಜನತೆಗೆ ಘೋಷಿಸಲು ಹೆಮ್ಮೆ ಪಡುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ. 
ನಾನು ಮತ್ತು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವುದರಿಂದ ನಮ್ಮ ದೇಶಗಳ ಜನತೆಯೊಂದಿಗೆ ಹೆಚ್ಚು ಸಂಪರ್ಕದಲ್ಲಿರಲು ಸಾಧ್ಯವಾಗುತ್ತಿದೆ. ಪ್ರಜೆಗಳಿಂದ ಆಯ್ಕೆಯಾದವರೊಂದಿಗೆ ನೇರವಾಗಿ ಮಾತನಾಡುವ ಅವಕಾಶ ಒದಗಿಸುವ ವಿಷಯದಲ್ಲಿ ನಮಗೆ ನಂಬಿಕೆ ಇದೆ. ಇದಕ್ಕೆ ಜನಬೆಂಬಲವೂ ಅತ್ಯುತ್ತಮ ರೀತಿಯಲ್ಲಿ ವ್ಯಕ್ತವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. 
ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡೊನಾಲ್ಡ್ ಟ್ರಂಪ್ ಗೆ ಅತಿ ಹೆಚ್ಚು ಅನುಯಾಯಿಗಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com