ಷರೀಫ್'ಗೆ ಕ್ಲೀನ್ ಚಿಟ್ ದೊರಕಿದರೆ ಪಾಕಿಸ್ತಾನದ ಸಾರ್ವಭೌಮತ್ವ ಅಪಾಯಕ್ಕೆ ಸಿಲುಕಲಿದೆ: ಇಮ್ರಾನ್ ಖಾನ್

ಅಕ್ರಮ ಆಸ್ತಿ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ನೇತೃತ್ವದ ಜಂಟಿ ತನಿಖಾ ತಂಡದಿಂದ ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರಿಗೆ ಕ್ಲೀನ್ ಚಿಟ್ ದೊರಕಿದ್ದೇ ಆದರೆ, ಪಾಕಿಸ್ತಾನದ ಸಾರ್ವಭೌಮತ್ವ ಅಪಾಯಕ್ಕೆ ಸಿಲುಕಲಿದೆ ಎಂದು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ...
ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್
ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್
ಇಸ್ಲಾಮಾಬಾದ್: ಅಕ್ರಮ ಆಸ್ತಿ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ನೇತೃತ್ವದ ಜಂಟಿ ತನಿಖಾ ತಂಡದಿಂದ ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರಿಗೆ ಕ್ಲೀನ್ ಚಿಟ್ ದೊರಕಿದ್ದೇ ಆದರೆ, ಪಾಕಿಸ್ತಾನದ ಸಾರ್ವಭೌಮತ್ವ ಅಪಾಯಕ್ಕೆ ಸಿಲುಕಲಿದೆ ಎಂದು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರು ಗುರುವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಪ್ರಕರಣ ಸಂಬಂಧ ಷರೀಫ್ ಅವರು ರಕ್ಷಣೆಗೊಳಗಾದರೆ ಪಾಕಿಸ್ತಾನ ರಾಷ್ಟ್ರದ ಸಾರ್ವಭೌಮತ್ವ ಅಪಾಯಕ್ಕೆ ಸಿಲುಕಿಕೊಳ್ಳಲಿದೆ. ಷರೀಫ್ ವಿರುದ್ದ ಆದೇಶ ಬರುವುದಕ್ಕಾಗಿ ಇಡೀ ದೇಶ ಕಾದು ಕುಳಿತಿದೆ. 
ಪ್ರಧಾನಮಂತ್ರಿ ಷರೀಫ್ ಅವರು ತಮ್ಮ ಮಕ್ಕಳು ಹಾಗೂ ರೋಗಗ್ರಸ್ತ ತಂದೆಯನ್ನು ಬಲಿಪಶುಗಳನ್ನಾಗಿ ಬಳಸಿಕೊಳ್ಳುತ್ತಿದ್ದು, ಪನಾಮಾ ದಾಖಲೆ ಸೋರಿಕೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ದೇಶದ ಹಣವನ್ನುಿ ಲೂಟಿ ಮಾಡಿ ವಿದೇಶದಲ್ಲಿ ಆಸ್ತಿ ಮಾಡಿದ್ದಾರೆ. ಇದೀಗ ತಮ್ಮ ವಿರುದ್ಧ ಆರೋಪ ಕೇಳಿಬರುತ್ತಿದ್ದಂತೆಯೇ ಪ್ರಕರಣದಲ್ಲಿ ಮಕ್ಕಳು ಹಾಗೂ ತಂದೆಯನ್ನು ಸಿಲುಕಿಸುತ್ತಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com