ಹಫೀಜ್ ಸಯೀದ್ ಬೆಂಬಲಿತ ಸಂಘಟನೆಯನ್ನು ನಿಷೇಧಿಸಿದ ಪಾಕಿಸ್ತಾನ

Published On :
ನವದೆಹಲಿ: 2008 ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಉಗ್ರ ಸಂಘಟನೆಯ ಸಹ ಸಂಘಟನೆಯನ್ನು ಪಾಕಿಸ್ತಾನ ನಿಷೇಧಿಸಿದೆ.
ಹಫೀಜ್ ಸಯೀದ್ ಬೆಂಬಲಿತ ತೆಹ್ರೀಕ್-ಎ-ಆಜಾದಿ ಉಗ್ರ ಸಂಘಟನೆಯನ್ನು ಪಾಕಿಸ್ತಾನ ರದ್ದುಗೊಳಿಸಿದ್ದು, ಪಾಕಿಸ್ತಾನದ ಭಯೋತ್ಪಾದನೆಯ ನಿಗ್ರಹಕ್ಕಾಗಿ ಇರುವ ರಾಷ್ಟ್ರೀಯ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಭಯೋತ್ಪಾದಕ ಸಂಘಟನೆಯ ಹೆಸರನ್ನು ನಿಷೇಧಿತ ಉಗ್ರ ಸಂಘಟನೆಗಳ ಪಟ್ಟಿಗೆ ಸೇರಿಸಲಾಗಿದೆ.
ಜೂ.8 ರಂದು ಉಗ್ರ ಸಂಘಟನೆಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂಬ ಬಗ್ಗೆ ವರದಿ ಪ್ರಕಟವಾಗಿದ್ದು, ಇದಕ್ಕೂ ಮುನ್ನ ಜನವರಿ ತಿಂಗಳಲ್ಲಿ ಪಾಕಿಸ್ತಾನ ಉಗ್ರ ಹಫೀಜ್ ಸಯೀದ್ ನ ಉಗ್ರ ಸಂಘಟನೆಯನ್ನು ಅಂಡರ್ ವಾಚ್ ಪಟ್ಟಿಗೆ ಸೇರಿಸಿ, ಹಫೀಜ್ ಸಯೀದ್ ಗೆ ಗೃಹ ಬಂಧನ ವಿಧಿಸಿತ್ತು. ಇದಾದ ಬಳಿಕ ಉಗ್ರ ಹಫೀಜ್ ಸಯೀದ್ ಜೆಯುಡಿ ಉಗ್ರ ಸಂಘಟನೆಯ ಕೆಲಸಗಲನ್ನು ತೆಹ್ರೀಕ್-ಎ-ಆಜಾದಿ ಉಗ್ರ ಸಂಘಟನೆಗೆ ವಹಿಸಿದ್ದ ಎಂದು ತಿಳಿದುಬಂದಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ ಪಾಕಿಸ್ತಾನ ಹಫೀಜ್ ಸಯೀದ್ ನೇತೃತ್ವದ ಉಗ್ರ ಸಂಘಟನೆಯ ಸಹ ಸಂಘಟನೆಯನ್ನು ನಿಷೇಧಿಸಿದೆ.
ಇದೇ ವೇಳೆ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ಪಟ್ಟಿಯನ್ನು ಇಂಟರ್ ಗೌರ್ನಮೆಂಟಲ್ ಫೈನಾನ್ಶಿಯಲ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಸಹ ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳನ್ನು ಪಟ್ಟಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಎಚ್ಚೆತ್ತುಕೊಂಡು ಈ ನಿರ್ಧಾರ ಕೈಗೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


