ಅಮೆರಿಕದ ನೈಟ್‌ ಕ್ಲಬ್‌ನಲ್ಲಿ ಗುಂಡಿನ ದಾಳಿ: 17 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಅಮೆರಿಕದ ಅರ್ಕನ್ಸಾಸ್‌ ರಾಜ್ಯದ ಲಿಟಲ್‌ ರಾಕ್‌ನ ನೈಟ್‌ ಕ್ಲಬ್‌ ವೊಂದರಲ್ಲಿ ಶನಿವಾರ ಬಂದೂಕುಧಾರಿಯೊಬ್ಬ ಮನಬಂದಂತೆ....
ಲಿಟಲ್‌ ರಾಕ್‌ ನೈಟ್‌ ಕ್ಲಬ್‌
ಲಿಟಲ್‌ ರಾಕ್‌ ನೈಟ್‌ ಕ್ಲಬ್‌
ವಾಷಿಂಗ್ಟನ್: ಅಮೆರಿಕದ ಅರ್ಕನ್ಸಾಸ್‌ ರಾಜ್ಯದ ಲಿಟಲ್‌ ರಾಕ್‌ನ ನೈಟ್‌ ಕ್ಲಬ್‌ ವೊಂದರಲ್ಲಿ ಶನಿವಾರ ಬಂದೂಕುಧಾರಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 17 ಮಂದಿ ಗಾಯಗೊಂಡಿದ್ದಾರೆ ಮತ್ತು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ವರದಿಗಳ ಪ್ರಕಾರ, ನೈಟ್‌ ಕ್ಲಬ್‌ನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ವಿಚಾರವಾಗಿ ನಡೆದ ಗಲಾಟೆಯೇ ಗುಂಡಿನ ದಾಳಿಗೆ ಕಾರಣ ಎನ್ನಲಾಗಿದೆ. ಆದರೆ ಇದು ಉದ್ದೇಶಪೂರ್ವಕವಾಗಿ ನಡೆದ ದಾಳಿಯೋ ಅಥವಾ ಭಯೋತ್ಪಾದಕ ಕೃತ್ಯವೋ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವನ ಸ್ಥತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಗಾಯಗೊಂಡಿರುವ 17 ಮಂದಿಗೂ ಗುಂಡು ತಗುಲಿಲ್ಲ. ಕೆಲವರು ಕಾಲ್ತುಳಿತಕ್ಕೆ ಸಿಕ್ಕಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ದಾಳಿಕೋರನನ್ನು ವಶಕ್ಕೆ ಪಡೆಯಲಾಗಿದೆಯೇ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com