ಪನಾಮಾ ಸಿಟಿ: ಅಮೆರಿಕಾದ ಪನಾಮಾ ಸಿಟಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿ, 36ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.
ಆಂಟನ್ ಬಳಿಯಿರುವ ಪಾನ್-ಅಮೆರಿಕನ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ 16 ಮಂದಿ ದುರ್ಮರಣವನ್ನಪ್ಪಿ, 36 ಜನರಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.
ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿರುವ ಅಧಿಕಾರಿಗಳಿ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಗಾಯಗೊಂಡಿರುವ ಬಹುತೇಕ ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.