ಇರಾಕ್: ಮದುವೆ ಸಮಾರಂಭದಲ್ಲಿ ಬಾಂಬ್ ಸ್ಫೋಟ, ಕನಿಷ್ಠ 26 ಸಾವು

ಇರಾಕ್ ನ ಸಲಾಹುದ್ದೀನ್ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬಗ್ದಾದ್: ಇರಾಕ್ ನ ಸಲಾಹುದ್ದೀನ್ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಕನಿಷ್ಠ 26 ಮಂದಿ ಮೃತಪಟ್ಟಿದ್ದಾರೆ ಮತ್ತು 24 ಮಂದಿ ಗಾಯಗೊಂಡಿದ್ದಾರೆ ಎಂದು ಗುರುವಾರ ಭದ್ರತಾ ಮೂಲಗಳು ತಿಳಿಸಿವೆ.
ಬುಧವಾರ ರಾತ್ರಿ ಈ ದಾಳಿ ನಡೆದಿದ್ದು, ಸ್ಫೋಟಕ ಜಾಕೆಟ್ ಧರಿಸಿದ್ದ ಇಬ್ಬರು ಆತ್ಮಾಹುತಿ ದಾಳಿಕೋರರು ಮದುವೆ ಪಾರ್ಟಿ ಹಾಲ್ ಗೆ ನುಗ್ಗಿ ತಮ್ಮನ್ನು ತಾವು ಸ್ಫೋಟಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com