ಸ್ವಿಸ್ ಕೆಫೆ ಮೇಲೆ ಶಸ್ತ್ರಾಸ್ತ್ರಧಾರಿಗಳಿಂದ ದಾಳಿ: 2 ಸಾವು
ವಾಯುವ್ಯ ಸ್ವಿಜರ್ಲೆಂಡ್ನ ಪ್ರತಿಷ್ಠಿತ ಕೆಫೆ 56 ಮೇಲೆ ಶಸ್ತ್ರಾಸ್ತ್ರಧಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟು ಇಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ...
ಸ್ವಿಸ್ ಕೆಫೆ ಮೇಲೆ ಶಸ್ತ್ರಾಸ್ತ್ರಧಾರಿಗಳಿಂದ ದಾಳಿ: 2 ಸಾವು
ಜೆನೆವಾ: ವಾಯುವ್ಯ ಸ್ವಿಜರ್ಲೆಂಡ್ನ ಪ್ರತಿಷ್ಠಿತ ಕೆಫೆ 56 ಮೇಲೆ ಶಸ್ತ್ರಾಸ್ತ್ರಧಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟು ಇಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಕೆಫೆ 56 ಬಳಿ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8.15ರ ಸುಮಾರಿಗೆ ಬಂದಿರುವ ಶಸ್ತ್ರಾಸ್ತ್ರಧಾರಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಇಬ್ಬರು ಗ್ರಾಹಕರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ದಾಳಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.