ಉತ್ತರ ಪ್ರದೇಶ ಚುನಾವಣೆ ಗೆಲುವು: ಪ್ರಧಾನಿ ಮೋದಿಗೆ ಟ್ರಂಪ್ ಅಭಿನಂದನೆ

ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಜಯ ಸಾಧಿಸಿದ ಹಿನ್ನಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸೋಮವಾರ ಅಭಿನಂದಿಸಿದ್ದಾರೆ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ
Updated on: 
ವಾಷಿಂಗ್ಟನ್: ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಜಯ ಸಾಧಿಸಿದ ಹಿನ್ನಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸೋಮವಾರ ಅಭಿನಂದಿಸಿದ್ದಾರೆ. 
ಕಳೆದ ರಾತ್ರಿ ದೂರವಾಣಿ ಮುಖಾಂತರ ಕರೆ ಮಾಡಿರುವ ಟ್ರಂಪ್ ಅವರು ಮೋದಿ ಅವರಿಗೆ ಇತ್ತೀಚಿನ ಚುನಾವಣೆಗಳಲ್ಲಿ ಜಯ ಸಾಧಿಸಿದ್ದಕ್ಕೆ ಅಭಿನಂದಿಸಿದರು ಎಂದು ಶ್ವೇತಭವನದ ವಕ್ತಾರ ಶಾನ್ ಸ್ಟೈಸರ್ ಅವರು ಹೇಳಿದ್ದಾರೆ. 
ಟ್ರಂಪ್ ಅವರ ಈ ಅಭಿನಂದನೆ ಭಾರತದ ಪಾಲಿಗೆ ಹಾಗೂ ಮೋದಿ ಅವರ ಜಾಗತಿಕ ಪ್ರಾಬಲ್ಯದ ದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಈ ಹಿಂದೆ ವಿಶ್ವದ ಇತರೆ ಹಲವು ರಾಷ್ಟ್ರಗಳ ಮುಖ್ಯಸ್ಥರು ಕೂಡಾ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ಗೆಲವುಗೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com