ತಸ್ನಿಮ್ ಸುದ್ದಿ ಸಂಸ್ಥೆ ಬಿಡುಗಡೆ ಮಾಡಿರುವ ಚಿತ್ರ
ತಸ್ನಿಮ್ ಸುದ್ದಿ ಸಂಸ್ಥೆ ಬಿಡುಗಡೆ ಮಾಡಿರುವ ಚಿತ್ರ

ಇರಾನ್ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, ಕನಿಷ್ಠ 35 ಸಾವು: ವರದಿ

ಇರಾನ್ ನ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 35 ಮಂದಿ ಮೃತಪಟ್ಟಿರುವುದಾಗಿ ಅಲ್ಲಿನ....
ತೆಹ್ರಾನ್: ಇರಾನ್ ನ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 35 ಮಂದಿ ಮೃತಪಟ್ಟಿರುವುದಾಗಿ ಅಲ್ಲಿನ ಸುದ್ದಿ ಸಂಸ್ಥೆಗಳು ಗುರುವಾರ  ವರದಿ ಮಾಡಿವೆ.
ತೆಹ್ರಾನ್ ನಿಂದ ಸುಮಾರು 14 ಕಿ.ಮೀ. ದೂರದಲ್ಲಿರುವ ಅಝಾದ್ ಶಹರ್ ನ ಝೆಮೆಸ್ತಾನ್ ಯುರ್ತ್ ಕಲ್ಲಿದ್ದಲು ಗಣಿಯಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, ಕನಿಷ್ಠ 35 ಮಂದಿ ಮೃತಪಟ್ಟಿದ್ದಾರೆ ಎಂದು ದಿ ಫಾರ್ಸ್, ಮೆಹ್ರ್ ಮತ್ತು ತಸ್ನಿನ್ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಗ್ಯಾಸ್ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com