ಇಸ್ಲಾಮಾಬಾದ್: ಪಾಕಿಸ್ತಾನ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಅಫ್ಘಾನಿಸ್ತಾನ್ ಪಡೆಗಳು ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಓರ್ವ ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಚಮನ್ ಜಿಲ್ಲೆಯ ಕಲಿ ಲುಕ್ಮನ್ ಮತ್ತು ಕಲಿ ಜಹಾಂಗಿರ್ ಗಳಲ್ಲಿನ ಪಾಕ್ ಚೆಕ್ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಅಫ್ಗಾನ್ ಸೇನೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಮೂವರು ಮೃತಪಟ್ಟಿದ್ದು 17 ಮಂದಿಗೆ ಗಾಯಗಳಾಗಿವೆ ಎಂದು ಪಾಕ್ ಸೇನಾಧಿಕಾರಿಗಳು ತಿಳಿಸಿದ್ದಾರೆ.
ಅಫ್ಗಾನಿಸ್ತಾನ ಸೇನೆಯ ಗುಂಡಿನ ದಾಳಿಗೆ ಪ್ರತ್ಯುತ್ತರವಾಗಿ ಪಾಕ್ ಸೇನೆ ಸಹ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.