ಇಮ್ಯಾನುಯಲ್ ತಮ್ಮ ಪ್ರತಿಸ್ಪರ್ಧಿ ಬಲಪಂಥೀಯ ಪಕ್ಷ ನ್ಯಾಷನಲ್ ಫ್ರಂಟ್ನ ಮರೀನ್ ಲೇ ಪೆನ್ ಅವರನ್ನು ಸೋಲಿಸಿದ್ದಾರೆ. ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಗೆಲುವು ಖಚಿತವಾಗುತ್ತಿದ್ದಂತೆ ರಾಷ್ಟ್ರವನ್ನುದ್ದೇಶಿಸಿ ಮಾರ್ಕನ್ ಮಾತನಾಡಿದ್ದು, ದೇಶದ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ತೆರೆದುಕೊಂಡಿದೆ. ದೇಶವನ್ನು ಹಲವಾರು ಸಮಸ್ಯೆಗಳು ಕಾಡುತ್ತಿವೆ. ಜನರ ಕಷ್ಟಗಳನ್ನು ಆಲಿಸುವುದು ನನ್ನ ಮೂಲ ಕರ್ತವ್ಯ, ನನ್ನ ಸಾಮರ್ಥ್ಯವನ್ನೆಲ್ಲಾ ಬಳಸಿ ಸಮಸ್ಯೆಗಳ ವಿರುದ್ಧ ಹೋರಾಡುತ್ತೇನೆ ಎಂದು ಹೇಳಿದ್ದಾರೆ.