ಮ್ಯಾಂಚೆಸ್ಟರ್: ಬ್ರಿಟನ್ನ ಮ್ಯಾಂಚೆಸ್ಟರ್ನಲ್ಲಿರುವ ಅರೇನಾ ಸ್ಟೇಡಿಯಂನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ.
ಅರೇನಾ ಸ್ಟೇಡಿಯಂನಲ್ಲಿ ಕಳೆದ ರಾತ್ರಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಈ ವೇಳೆ ಬಾಂಬ್ ಸ್ಫೋಟ ಸಂಭವಿಸಿದ್ದು 22 ಮಂದಿ ಮೃತಪಟ್ಟಿದ್ದು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇನ್ನು ಸ್ಫೋಟ ಕುರಿತಂತೆ ಯಾವುದೇ ಉಗ್ರ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇಸಿಸ್ ಬೆಂಬಲಿಗರು ಸಂಭ್ರಮವನ್ನು ಆಚರಿಸಿದ್ದು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.