ಕಳೆದ ತಿಂಗಳು ಘಟನೆ ಮಿಡ್ ಟೌನ್ ನಲ್ಲಿರುವ ಆಪಾರ್ಟ್ ಮೆಂಟ್ ವೊಂದರಲ್ಲಿ ಘಟನೆ ನಡೆದಿತ್ತು. ಜೋಡಿಗಳಿಬ್ಬರು ರಕ್ತದ ಮಡುವಿನಲ್ಲಿ ಬಿದ್ದಿರುವ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕಾಗಮಿಸಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದರು. ವಿಕ್ಟರ್ ಸಿಬ್ಸನ್ ತಲೆಗೆ ಗುಂಡು ಹೋಗಿ ನಂತರ ಆತನ ಗೆಳತಿಗೂ ಗುಂಡು ಹೊಕ್ಕಿತ್ತು.
ಚಿಕಿತ್ಸೆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದ ಸಿಬ್ಸನ್ ಪ್ರಾಣಾಪಾಯದಿಂದ ಪಾರಾಗಿದ್ದರೆ, ಚಿಕಿತ್ಸೆ ಫಲಕಾರಿಯಾಗದೆ ಹಾಗ್ ಮೃತಪಟ್ಟಿದ್ದಳು.
ಪ್ರಕರಣ ಸಂಬಂಧ ಕಳೆದ ಭಾನುವಾರ ಆರೋಪಿ ಸಿಬ್ಸನ್ ನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಪ್ರಕರಣ ಸಂಬಂಧ ಒಂದು ವೇಳೆ ಆರೋಪಿ ತಪ್ಪಿತಸ್ಥ ಎಂದು ಸಾಬೀತಾಗಿದ್ದೇ ಆದರೆ, ಆರೋಪಿಗೆ 99 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.