ಕಾಬುಲ್: ಭಾರತೀಯ ರಾಯಭಾರಿ ಕಚೇರಿ ಬಳಿ ಪ್ರಬಲ ಸ್ಫೋಟ; 80 ಸಾವು, 325ಕ್ಕೂ ಹೆಚ್ಚು ಜನರಿಗೆ ಗಾಯ

ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನಲ್ಲಿ ಪ್ರಬಲ ಬಾಂಬ್ ಸ್ಫೋಟಿಸಲಾಗಿದ್ದು, ಸ್ಫೋಟದಲ್ಲಿ 80 ಮಂದಿ ಸಾವನ್ನಪ್ಪಿದ್ದು 325ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ನಡೆದಿದೆ...
ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳಾಂತರ ಮಾಡುತ್ತಿರುವ ವ್ಯಕ್ತಿ
ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳಾಂತರ ಮಾಡುತ್ತಿರುವ ವ್ಯಕ್ತಿ
ನವದೆಹಲಿ/ಕಾಬುಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನಲ್ಲಿ ಪ್ರಬಲ ಬಾಂಬ್ ಸ್ಫೋಟಿಸಲಾಗಿದ್ದು, ಸ್ಫೋಟದಲ್ಲಿ 80 ಮಂದಿ ಸಾವನ್ನಪ್ಪಿದ್ದು 325ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಬುಧವಾರ ನಡೆದಿದೆ. 
ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸೇರಿ ಹಲವು ವಿದೇಶಿ ದೂತವಾಸ ಕಚೇರಿಗಳ ಬಳಿಯೇ ಸ್ಫೋಟ ಸಂಭವಿಸಿದ್ದು, ಭಾರತೀಯ ರಾಯಭಾರಿ ಕಚೇರಿಯಲ್ಲಿದ್ದ ಎಲ್ಲಾ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆಂದು ವರದಿಗಳು ತಿಳಿಸಿವೆ. 
ಸ್ಫೋಟದ ತೀವ್ರತೆಗೆ ಭಾರತೀಯ ರಾಯಭಾರಿ ಕಚೇರಿಗಳ ಬಾಗಿಲು ಮತ್ತು ಕಿಟಕಿಗಳು ಹಾನಿಗೊಳಗಾಗಿದ್ದು, ಸ್ಥಳದಲ್ಲಿ ಈಗಲೂ ದಟ್ಟ ಹೊಗೆ ಆವರಿಸಿದೆ ಎಂದು ಮೂಲಗಳು ತಿಳಿಸಿವೆ. 
ಸ್ಫೋಟದ ಹೊಣೆಯನ್ನು ಈವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತಿಕೊಂಡಿಲ್ಲ. ಯಾರನ್ನು ಗುರಿಯಾರಿಸಿಕೊಂಡು ದಾಳಿ ಮಾಡಲಾಗಿದೆ ಎಂಬುದು ಈ ವರೆಗೂ ಸ್ಪಷ್ಟವಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com