ಬೀಜಿಂಗ್: ಅರುಣಾಚಲ ಪ್ರದೇಶಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ.
ವಿವಾದಿತ ಪ್ರದೇಶಕ್ಕೆ ಭಾರತದ ರಕ್ಷಣಾ ಸಚಿವರ ಭೇಟಿಯಿಂದ ಶಾಂತಿಗೆ ಪೂರಕವಾಗಿರುವುದಿಲ್ಲ ಎಂದು ಚೀನಾ ವಿದೇಶಾಂಗ ಇಲಾಖೆ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ. " ಅರುಣಾಚಲ ಪ್ರದೇಶಕ್ಕೆ ಭಾರತದ ರಕ್ಷಣಾ ಸಚಿವರು ಭೇಟಿ ನೀಡಿರುವುದರ ಬಗ್ಗೆ ಚೀನಾದ ನಿಲುವಿನ ಬಗ್ಗೆ ನಿಮಗೆ ಸ್ಪಷ್ಟತೆ ಇರಬೇಕು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನ.05 ರಂದು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ನಿರ್ಮಲಾ ಸೀತಾರಾಮನ್ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚೀನಾದ ವಿದೇಶಾಂಗ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದು, ಭಾರತದ ರಕ್ಷಣಾ ಸಚಿವರ ಭೇಟಿಯಿಂದ ಶಾಂತಿಗೆ ಪೂರಕವಾಗಿರುವುದಿಲ್ಲ ಎಂದು ಹೇಳಿದೆ.
ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಲು ಭಾರತ ಚೀನಾದೊಂದಿಗೆ ಕೆಲಸ ಮಾಡಬೇಕು, ಈ ಉದ್ದೇಶಕ್ಕಾಗಿ ಚೀನಾದೊಂದಿಗೆ ಭಾರತ ಕೈಜೋಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.