ತಮ್ಮ ಸರ್ಕಾರ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಮಾಡಲು ಮತ್ತು ಯುವ ಉದ್ಯೋಗ ಸೃಷ್ಠಿಕರ್ತರನ್ನು ರಚಿಸಲು ಪ್ರಯತ್ನಿಸುತ್ತಿದೆ. ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತದ ಮೇಲೆ ನಮ್ಮ ನಂಬಿಕೆ ಇಟ್ಟು ಕಳೆದ ಮೂರು ವರ್ಷಗಳಲ್ಲಿ ಸುಮಾರು 1,200 ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಸಂಸ್ಥೆಗಳನ್ನು ಪ್ರಾರಂಭಿಸಲು ಮತ್ತು ಇತರ ಅನುಮತಿಗಳಿಗಾಗಿ ನಾವು ಪ್ರಕ್ರಿಯೆಗಳನ್ನು ಸರಳಗೊಳಿಸಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.