ಕೈರೋ: ಇಸ್ಲಾಮಿಕ್ ಸ್ಟೇಟ್ ಉಗ್ರರು ಶುಕ್ರವಾರ ಈಜಿಪ್ಟ್‌ನ ಉತ್ತರ ಭಾಗದ ಸಿನಾಯ್ ಪ್ರಾಂತ್ಯದ ಮಸೀದಿಯೊಂದನ್ನು ಸ್ಫೋಟಿಸಿ, ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 305ಕ್ಕೆ ಏರಿಕಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಎಲ್-ಆರಿಷ್ ಪ್ರಾಂತ್ಯದ ರಾಜಧಾನಿ ಬಿರ್ ಅಲ್ ಅಬ್ದ್ ನಗರ ಅಲ್-ರವ್ದಾಹ್ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಉಗ್ರರು ಈ ದಾಳಿ ನಡೆಸಿದ್ದು, ದಾಳಿಯಲ್ಲಿ 27 ಮಕ್ಕಳು ಸೇರಿದಂತೆ 305 ಮಂದಿ ಮೃತಪಟ್ಟಿದ್ದಾರೆ ಮತ್ತು 128 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.
ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದ್ದು, 50ಕ್ಕೂ ಹೆಚ್ಚು ಆ್ಯಂಬುಲೆನ್ಸ್‌ಗ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿ ತಿಳಿಸಿದೆ.
ನಿನ್ನೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಉಗ್ರರು ನಾಲ್ಕು ವಾಹನಗಳನ್ನು ಮಸೀದಿಗೆ ನುಗ್ಗಿಸಿ ಸ್ಫೋಟಿಸಿದ್ದರು. ಎಂದು ಅಧಿಕಾರಿಗಳು ತಿಳಿಸಿದ್ದಾರೆ.