ಅಮೆರಿಕದಲ್ಲಿ ದುಷ್ಕರ್ಮಿಗಳ ಗುಂಡಿಗೆ ಭಾರತೀಯ ಮೂಲದ ಪ್ರಜೆ ಬಲಿ

ದುಷ್ಕರ್ಮಿಗಳ ಗುಂಡಿನ ದಾಳಿಗೆ ಭಾರತೀಯ ಮೂಲದ ಪ್ರಜೆಯೊಬ್ಬರು ಸಾವನ್ನಪ್ಪಿರುವ ಘಟನೆ ಅಮೆರಿಕಾದ ಮಿಸ್ಸಿಸ್ಸಿಪ್ಪಿಯಲ್ಲಿ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನ್ಯೂಯಾರ್ಕ್: ದುಷ್ಕರ್ಮಿಗಳ ಗುಂಡಿನ ದಾಳಿಗೆ ಭಾರತೀಯ ಮೂಲದ ಪ್ರಜೆಯೊಬ್ಬರು ಸಾವನ್ನಪ್ಪಿರುವ ಘಟನೆ ಅಮೆರಿಕಾದ ಮಿಸ್ಸಿಸ್ಸಿಪ್ಪಿಯಲ್ಲಿ ನಡೆದಿದೆ. 
ಸಂದೀಪ್ ಸಿಂಗ್ ಹತ್ಯೆಯಾದ ಭಾರತೀಯ ಪ್ರಜೆಯಾಗಿದ್ದಾರೆ. ಮಿಸ್ಸಿಸ್ಸಿಪ್ಪಿಯ ಜಾಕ್ಸನ್ ಸಿಟಿಯಲ್ಲಿ ಭಾನುವಾರ ಘಟನೆ ನಡೆದಿದೆ. 
ಸಂದೀಪ್ ಅವರು ತಮ್ಮ ಇಬ್ಬರು ಗೆಳೆಯರೊಂದಿಗೆ ಮನೆಯ ಮುಂದೆ ನಿಂತಿದ್ದ ಸಂದರ್ಭದಲ್ಲಿ ಬಂದೂಕು ಹಿಡಿದು ದುಷ್ಕರ್ಮಿಗಳು ಬಂದಿದ್ದಾರೆ. ಈ ವೇಳೆ ಸಂದೀಪ್ ಅವರ ಮೇಲೆ ಗುಂಡು ಹಾರಿಸಿ ಸ್ಥಳದಲ್ಲಿದ್ದ ಹಣ ಹಾಗೂ ಮೊಬೈಲ್ ಫೋನ್ ಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ. 
ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಸಿಂಗ್ ಅವರನ್ನು ಮಿಸ್ಸಿಸ್ಸಿಪ್ಪಿ ವಿಶ್ವವಿದ್ಯಾಲಯದ ವೈದ್ಯಕೀಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಿಂಗ್ ಅವರು ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. 
ಸಿಂಗ್ ಅವರು ಜಲಂಧರ್ ಮೂಲದವರಾಗಿದ್ದು, ಪ್ರವಾಸಿಗರ ವೀಸಾ ಮೂಲಕ ನಾಲ್ಕು ವರ್ಷಗಳ ಹಿಂದಷ್ಟೇ ಅಮೆರಿಕಾಗೆ ಹೋಗಿದ್ದರು. ಬಳಿಕ ಅಲ್ಲಿಯೇ ಕಾರ್ಯನಿರ್ವಹಿಸಲು ಅನುಮತಿ ದೊರಕಿತ್ತು. 
ನ.16 ರಂದು ದುಷ್ಕರ್ಮಿಗಳ ಗುಂಪೊಂದು ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com