ಉತ್ತರ ಕೊರಿಯಾ ಕ್ಷಿಪಣಿ ಪರೀಕ್ಷೆ: ಜಪಾನ್ ಆತಂಕ, ಕಿಮ್ ಜಾಂಗ್ ಉನ್ ವಿರುದ್ಧ ಅಮೆರಿಕ ಕಿಡಿ

ಅಮೆರಿಕವನ್ನೂ ತಲುಪಬಲ್ಲ ಕ್ಷಿಪಣಿಯನ್ನು ಉತ್ತರ ಕೊರಿಯಾ ಉಡಾಯಿಸಿದ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ವಾಷಿಂಗ್ಟನ್: ಅಮೆರಿಕವನ್ನೂ ತಲುಪಬಲ್ಲ ಕ್ಷಿಪಣಿಯನ್ನು ಉತ್ತರ ಕೊರಿಯಾ ಉಡಾಯಿಸಿದ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ನಾವು  ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಉತ್ತರ ಕೊರಿಯಾದ ಕ್ಷಿಪಣಿ ಯೋಜನೆ ಬಗ್ಗೆ ಈ ಹಿಂದೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತುರ್ತುಸಭೆ ನಡೆಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ  ತಕ್ಷಣಕ್ಕೆ ಪ್ರತಿಕ್ರಿಯೆ ನೀಡಿಲ್ಲ. ವಾಷಿಂಗ್ಟನ್ ನಲ್ಲಿ ಮಾತನಾಡಿದ ಅವರು, "ಇದನ್ನು ನಾವು ಗಮನಿಸುತ್ತೇವೆ ಎಂದಷ್ಟೇ ಹೇಳಬಲ್ಲೆ. ಈ ಪರಿಸ್ಥಿತಿಯನ್ನು ನಾವು ನಿರ್ವಹಿಸುತ್ತೇವೆ" ಎಂದು ಟ್ರಂಪ್ ಶ್ವೇತ ಭವನದಲ್ಲಿ ತಿಳಿಸಿದ್ದಾರೆ. 
ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್, ಪ್ರಸ್ತುತ ಉತ್ತರ ಕೊರಿಯಾ ಪರೀಕ್ಷೆಗೊಳಪಡಿಸಿರುವ ಕ್ಷಿಪಣಿ ಅತ್ಯಂತ ದೂರಗಾಮಿ ಕ್ಷಿಪಣಿಯಾಗಿದೆ. 
ನೆರೆಯ ರಾಷ್ಟ್ರಗಳ ಆಂತಕ, ಟೀಕೆ
ಇದೇ ವೇಳೆ ಉತ್ತರ ಕೊರಿಯಾದ ಈ ಕ್ರಮವನ್ನು ನೆರೆಯ ರಾಷ್ಟ್ರಗಳಾದ ಜಪಾನ್ ಹಾಗೂ ದಕ್ಷಿಣ ಕೊರಿಯಾ ಕಟುವಾಗಿ ಟೀಕಿಸಿವೆ. "ಉತ್ತರ ಕೊರಿಯಾದ ಈ ಕ್ಷಿಪಣಿ ಪರೀಕ್ಷೆ ಹಿಂಸಾತ್ಮಕ ಕ್ರಮ" ಎಂದು ಜಪಾನಿ ಪ್ರಧಾನಿ ಶಿಂಝೊ  ಅಬೆ ಬಣ್ಣಿಸಿದ್ದರೆ, "ಇದು ಅಜಾಗರೂಕ ನಡವಳಿಕೆ" ಎಂದು ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೀ ಪ್ರತಿಕ್ರಿಯಿಸಿದ್ದಾರೆ. 
ಇನ್ನು ಉತ್ತರ ಕೊರಿಯಾ ಪರೀಕ್ಷೆಗೆ ಪ್ರತಿಯಾಗಿ ದಕ್ಷಿಣ ಕೊರಿಯಾ ಸೇನೆ, ನಿಖರ ದಾಳಿಯ ಕ್ಷಿಪಣಿಯನ್ನು ಉತ್ತರ ಕೊರಿಯಾದತ್ತ ಗುರಿಮಾಡಿದೆ. 
ಇದಕ್ಕೂ ಮುನ್ನ ಉತ್ತರ ಕೊರಿಯಾ ಸೆಪ್ಟೆಂಬರ್ 15ರಂದು ಕೊನೆಯ ಕ್ಷಿಪಣಿ ಪರೀಕ್ಷೆ ನಡೆಸಿತ್ತು. ಆ ಬಳಿಕ ಯಾವುದೇ ಚಟುವಟಿಕೆಯನ್ನು ಹಮ್ಮಿಕೊಳ್ಳದ ಹಿನ್ನೆಲೆಯಲ್ಲಿ, ಉತ್ತರ ಕೊರಿಯಾ ರಾಜಿಸೂತ್ರಕ್ಕೆ ಒಪ್ಪಿಕೊಂಡಿದೆ ಎಂಬ  ವಾತಾವರಣ ನಿರ್ಮಾಣವಾಗಿತ್ತು. ಆದರೆ ಇದೀಗ ನೇರವಾಗಿ ಅಮೆರಿಕವನ್ನೇ ಟಾರ್ಗೆಟ್ ಮಾಡಿಕೊಳ್ಳುವ ಮೂಲಕ ಉತ್ತರ ಕೊರಿಯಾ ಮತ್ತೆ ತನ್ನ ಪ್ರಚೋದನಾ ನಡೆಯನ್ನು ಮುಂದುವರೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com