ರಷ್ಯಾ: ಭಯೋತ್ಪಾದನೆಯನ್ನು ಧರ್ಮದೊಂದಿಗೆ ತಳುಕು ಹಾಕುವುದಕ್ಕೆ ಆಗುವುದಿಲ್ಲ ಹಾಗೆ ಮಾಡಲೂ ಬಾರದು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಸುಷ್ಮಾ ಸ್ವರಾಜ್, ಭಯೋತ್ಪಾದನೆಯನ್ನು ಯಾವುದೇ ಧರ್ಮದೊಂದಿಗೆ ತಳುಕು ಹಾಕುವುದಕ್ಕೆ ಸಾಧ್ಯವಿಲ್ಲ, ಹಾಗೆ ಮಾಡುವುದಕ್ಕೆ ಆಗುವುದೂ ಇಲ್ಲ, ಭಾರತ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಖಂಡಿಸುತ್ತದೆ ಎಂದಿದ್ದಾರೆ.
ಶಾಂಘೈ ಸಹಕಾರ ಸಂಘಟನೆಯ ಪೂರ್ಣಾವಧಿ ಸದಸ್ಯ ರಾಷ್ಟ್ರವಾಗಿ ಆಯ್ಕೆಯಾಗಿರುವ ಪಾಕಿಸ್ತಾನಕ್ಕೆ ಸುಷ್ಮಾ ಸ್ವರಾಜ್ ಅಭಿನಂದನೆ ಸಲ್ಲಿಸಿದ್ದಾರೆ, ಭಾರತ ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರವಾದ ಬಳಿಕ ನಡೆಯುತ್ತಿರುವ ಮೊದಲ ಶೃಂಗಸಭೆಯಾದ್ದರಿಂದ ಈ ಸಭೆ ಭಾರತಕ್ಕೆ ವಿಶೇಷವಾಗಿದೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.