ಇಸ್ಲಾಮಾಬಾದ್: ಮಾಜಿ ಕ್ರಿಕೆಟಿಗ, ಪಾಕಿಸ್ತಾನದ ತೆಹ್ರಿಕ್ ಎ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರ ವಿರುದ್ಧ ಆಯೋಗ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಚುನಾವಣಾ ಆಯೋಗವನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ವಿಚಾರಣೆಗೆ ಗೈರು, ವಿಚಾರಣೆಗೆ ಹಾಜರಾಗದಿರುವುದಕ್ಕೆ ಕ್ಷಮಾಪಣೆ ಕೋರುವಂತೆ ಸೂಚಿಸಲಾಗಿತ್ತು. ಈ ಯಾವುದನ್ನು ಮಾಡದ ಹಿನ್ನೆಲೆಯಲ್ಲಿ ಆಯೋಗ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಚುನಾವಣಾ ಆಯೋಗದ ಮುಖ್ಯಸ್ಥರು ಸೇರಿದಂತೆ ಐವರ ನ್ನೊಳಗೊಂಡ ನ್ಯಾಯ ಪೀಠ ಇಮ್ರಾನ್ ಖಾನ್ ರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶಿಸಿದೆ. ಇನ್ನು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 26ಕ್ಕೆ ಮುಂದೂಡಿದೆ.
ಚುನಾವಣಾ ಆಯೋಗ ಹೊರಡಿಸಿರುವ ಆದೇಶವನ್ನು ಇಸ್ಲಾಮಾಬಾದ್ ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗುವುದು ಎಂದು ಪಿಟಿಐ ವಕ್ತಾರ ನೆಯೆಮುಲ್ ಹಕ್ ತಿಳಿಸಿದ್ದಾರೆ.