ವಿದೇಶ

ಯುಎಸ್ ಮಾಜಿ ಅಧ್ಯಕ್ಷ ಕೆನಡಿ ಹತ್ಯೆಯ ರಹಸ್ಯ ಕಡತಗಳನ್ನು ಬಿಡುಗಡೆ ಮಾಡಲಿದ್ದಾರೆ ಟ್ರಂಪ್!

ಅಮೆರಿಕಾದ ಮಾಜಿ ಅಧ್ಯಕ್ಷ ಜಾನ್ ಎಫ್.ಕೆನಡಿ ಅವರ ಹತ್ಯೆಗೆ ಸಂಬಂಧಿಸಿದ ರಹಸ್ಯೆ ಕಡತಗಳನ್ನು ಬಿಡುಗಡೆ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಯುಎಸ್ ಮಾಜಿ ಅಧ್ಯಕ್ಷ ಕೆನಡಿ ಹತ್ಯೆಯ ರಹಸ್ಯ ಕಡತಗಳನ್ನು ಬಿಡುಗಡೆ ಮಾಡಲಿದ್ದಾರೆ ಟ್ರಂಪ್!
ಡೊನಾಲ್ಡ್ ಟ್ರಂಪ್
Published On :
ವಾಷಿಂಗ್ ಟನ್: ಅಮೆರಿಕಾದ ಮಾಜಿ ಅಧ್ಯಕ್ಷ ಜಾನ್ ಎಫ್.ಕೆನಡಿ ಅವರ ಹತ್ಯೆಗೆ ಸಂಬಂಧಿಸಿದ ರಹಸ್ಯೆ ಕಡತಗಳನ್ನು ಬಿಡುಗಡೆ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 
1963 ರ ನವೆಂಬರ್ 22 ರಂದು ಜಾನ್ ಎಫ್ ಕೆನಡಿ ಹತ್ಯೆ ನಡೆದಿತ್ತು. ಆಗುಂತಕ ಲೀ ಹಾರ್ವೆ ಓಸ್ವಾಲ್ಡ್‌ನ ಗುಂಡೇಟಿನಿಂದ ಕೆನಡಿ ಹತರಾದರು ಎಂಬ ತನಿಖಾ ಆಯೋಗದ ವರದಿಯನ್ನು ಪ್ರಶ್ನಿಸುವ ಅನೇಕ ಥಿಯರಿಗಳಿದ್ದು, ಈ ಹಿನ್ನೆಲೆಯಲ್ಲಿ ರಹಸ್ಯ ಕಡತಗಳ ಬಿಡುಗಡೆ ಮಹತ್ವ ಪಡೆದುಕೊಂಡಿದೆ. 
"ಹಲವು ವರ್ಷಗಳಿಂದ ನಿರ್ಬಂಧಿಸಲಾಗಿರುವ ಜಾನ್ ಎಫ್.ಕೆನಡಿ ಅವರ ಹತ್ಯೆಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಬಿಡುಗಡೆ ಮಾಡಲು ಅನುಮತಿ ನೀಡಲಾಗುತ್ತದೆ" ಎಂದು ಟ್ರಂಪ್ ಹೇಳಿದ್ದಾರೆ. ಕೆನಡಿ ಅವರ ಹತ್ಯೆಯಾದ 54 ವರ್ಷಗಳ ನಂತರ ರಹಸ್ಯ ಕಡತಗಳು ಬಿಡುಗಡೆಯಾಗುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.