ಉಭಯ ನಾಯಕರ ದ್ವಿಪಕ್ಷೀಯ ಮಾತುಕತೆ ಬಗ್ಗೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಎಸ್.ಜೈಶಂಕರ್ ಪ್ರತಿಕ್ರಿಯೆ ನೀಡಿದ್ದು, ಗಡಿ ಭಾಗದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಬಗ್ಗೆ ಇಬ್ಬರೂ ನಾಯಕರು ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಡೋಕ್ಲಾಂ ಬಿಕ್ಕಟ್ಟಿನಂತಹ ಬಿಕ್ಕಟ್ಟು ಎದುರಾಗದಂತೆ ಎಚ್ಚರ ವಹಿಸಲು ಇಬ್ಬರೂ ನಾಯಕರು ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ.