ಈಶಾನ್ಯದಲ್ಲಿ ಮೂರನೆಯವರ ಮಧ್ಯಪ್ರವೇಶ ಬೇಕಿಲ್ಲ: ಜಪಾನ್ ಎಫ್ ಡಿಐ ಬಗ್ಗೆ ಚೀನಾ ಪ್ರತಿಕ್ರಿಯೆ
ಭಾರತದ ಈಶಾನ್ಯ ರಾಜ್ಯಗಳಲ್ಲಿ ಜಪಾನ್ ಹೂಡಿಕೆ ಪ್ರಸ್ತಾವನೆಯ ಬಗ್ಗೆ ಚೀನಾ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮೂರನೆಯವರ ಮಧ್ಯಪ್ರವೇಶ ಅಗತ್ಯವಿಲ್ಲ...
ಬೀಜಿಂಗ್: ಭಾರತದ ಈಶಾನ್ಯ ರಾಜ್ಯಗಳಲ್ಲಿ ಜಪಾನ್ ಹೂಡಿಕೆ ಪ್ರಸ್ತಾವನೆಯ ಬಗ್ಗೆ ಚೀನಾ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮೂರನೆಯವರ ಮಧ್ಯಪ್ರವೇಶ ಅಗತ್ಯವಿಲ್ಲ ಎಂದು ಚೀನಾ ವಿದೇಶಾಂಗ ಇಲಾಖೆ ಹೇಳಿದೆ.
ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಭಾರತ ಪ್ರವಾಸದ ವೇಳೆಯಲ್ಲಿ ಜಪಾನ್ ಈಶಾನ್ಯ ರಾಜ್ಯಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಭಾರತ-ಜಪಾನ್ ಜಂಟಿ ಹೇಳಿಕೆ ಬಿಡುಗಡೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚೀನಾದ ವಿದೇಶಾಂಗ ಇಲಾಖೆ ಭಾರತ-ಚೀನಾ ಗಡಿ ವಿವಾದದಲ್ಲಿ ಮೂರನೇಯವರು ಮಧ್ಯಸ್ಥಿಕೆ ವಹಿಸುವಂತಿಲ್ಲ ಎಂದು ಹೇಳಿದೆ.
ಅರುಣಾಚಲ ಪ್ರದೇಶದ ಹೆಸರನ್ನು ಪ್ರಸ್ತಾಪಿಸದೇ ಚೀನಾ ವಿದೇಶಾಂಗ ಇಲಾಖೆ ಈ ಹೇಳಿಕೆ ನೀಡಿದ್ದು, ಭಾರತ-ಚೀನಾ ಗಡಿ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದಕ್ಕೆ ಯತ್ನಿಸುತ್ತಿವೆ. ಈ ಹಂತದಲ್ಲಿ ಮೂರನೆಯವರು ಮಧ್ಯಸ್ಥಿಕೆ ವಹಿಸುವುದು ಸರಿಯಲ್ಲ ಎಂದು ವಕ್ತಾರರು ಹೇಳಿದ್ದಾರೆ.