ಲಂಡನ್ ಬಾಂಬ್ ಸ್ಫೋಟ ಪ್ರಕರಣ: ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ ಬ್ರಿಟನ್ ಪೊಲೀಸರು
ಪಾರ್ಸನ್ ಗ್ರೀನ್ ಸುರಂಗ ಮಾರ್ದ ರೈಲು ನಿಲ್ದಾಣದಲ್ಲಿ ಕಳೆದ ಶುಕ್ರವಾರ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಬ್ರಿಟನ್ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ...
ಸ್ಫೋಟ ಸಂಭವಿಸಿದ ಸ್ಥಳದಲ್ಲಿರುವ ಭದ್ರತಾ ಸಿಬ್ಬಂದಿಗಳು (ಸಂಗ್ರಹ ಚಿತ್ರ)
ಲಂಡನ್: ಪಾರ್ಸನ್ ಗ್ರೀನ್ ಸುರಂಗ ಮಾರ್ದ ರೈಲು ನಿಲ್ದಾಣದಲ್ಲಿ ಕಳೆದ ಶುಕ್ರವಾರ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಬ್ರಿಟನ್ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.
ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸದಂತೆ 21 ವರ್ಷದ ವ್ಯಕ್ತಿಯೊಬ್ಬನ್ನು ಭಯೋತ್ಪಾದನಾ ಕಾಯ್ದೆ ಅಡಿಯಲ್ಲಿ ಪಶ್ಚಿಮ ಲಂಡನ್ ನ ಹೌನ್‌ಸ್ಲೊನಲ್ಲಿ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಆರೋಪಿಯನ್ನು ದಕ್ಷಿಣ ಲಂಡನ್ ನಲ್ಲಿರುವ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಂಧಿತ ವ್ಯಕ್ತಿಯ ಕುರಿತು ಈ ವರೆಗೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.
ನಿನ್ನೆಯಷ್ಟೇ ಬಾಂಬ್ ಸ್ಫೋಟ ಪ್ರಕರಣ ಸಂಬಂಧ 18 ವರ್ಷದ ವ್ಯಕ್ತಿಯೊಬ್ಬನನ್ನು ಕೆಂಟ್ ನ ಪೊಲೀಸರು ಡೋವರ್ ನಲ್ಲಿ ಬಂಧಿಸಿದ್ದರು.
ಕಳೆದ ಶುಕ್ರವಾರ ಲಂಡನ್ ಸ್ಥಳೀಯ ಕಾಲಮಾನದ ಪ್ರಕಾರ ಬೆಳಿಗ್ಗೆ ಬೆಳಿಗ್ಗೆ 8.30ರ ಸುಮಾರಿಗೆ (ಭಾರತದ ಸಮಯ ಮಧ್ಯಾಹ್ನ 1 ಗಂಟೆ) ಹೆಚ್ಚು ಜನಸಂದಣಿಯ ಅವಧಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 29ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ದಾಳಿಯ ಹೊಣೆಯನ್ನು ಇಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿತ್ತು.