ಉಡಾವಣೆ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಪಾಕಿಸ್ತಾನ ನೌಕಾಪಡೆ ಮುಖ್ಯಸ್ಥ ಅಡ್ಮೈರಲ್ ಮುಹಮ್ಮದ್ ಜಕುಲ್ಲಾಹ್, ಕ್ಷಿಪಣಿ ಸಮರಕ್ಕೆ ಸಿದ್ಧವಾಗಿದೆ ಎಂದು ಹೇಳಿದರು. ಪಾಕಿಸ್ತಾನದ ನೌಕಾಪಡೆಯ ಉನ್ನತ ಮಟ್ಟದ ಸಿದ್ಧತೆ ಮತ್ತು ವೃತ್ತಿಪರತೆಯನ್ನು ಕ್ಷಿಪಣಿಯ ಯಶಸ್ವಿ ಉಡಾವಣೆ ಪ್ರತಿಫಲಿಸುತ್ತದೆ ಎಂದು ಅವರು ಹೇಳಿದರು.