ಘಟನಾ ಸ್ಥಳಕ್ಕೆ ಕೂಡಲೇ ಕುವೈತ್ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ವೇಗವಾಗಿ ಚಲಿಸುತ್ತಿದ್ದ ಬಸ್ ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ ಹೆಚ್ಚಾಗಿದೆ ಎನ್ನಲಾಗಿದೆ. ಅಂತೆಯೇ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಕಾರ್ಮಿಕರೆಲ್ಲರೂ ಕುವೈತ್ ಆಯಿಲ್ ಕಂಪನಿಯ ಕಾರ್ಮಿಕರು ಎಂದು ತಿಳಿದುಬಂದಿದೆ.