

ಇಸ್ಲಾಮಾಬಾದ್ : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷರ ಮುಂದೆ ಕಾಶ್ಮೀರ ವಿವಾದವನ್ನು ಪಾಕಿಸ್ತಾನ ಪ್ರಸ್ತಾಪಿಸಿದೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿನ ಪರಿಸ್ಥಿತಿ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಇದೆ ಎಂಬುದನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷರ ಮುಂದೆ ಪ್ರಸ್ತಾಪಿಸಿರುವುದಾಗಿ ವಿಶ್ವಸಂಸ್ಥೆಯಲ್ಲಿನ ಪಾಕಿಸ್ತಾನ ಪ್ರತಿನಿಧಿ ಮಾಲೀಹ ಲೊಧಿ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ಪಾಕಿಸ್ತಾನ ಮತ್ತು ಕಾಶ್ಮೀರ ಸಮುದಾಯದ ಸದಸ್ಯರೊಂದಿಗೆ ಈ ವಿಚಾರ ಕುರಿತು ಮಾತುಕತೆ ನಡೆಸಿರುವುದಾಗಿ ಮತ್ತೊಂದು ಟ್ವೀಟರ್ ನಲ್ಲಿ ಅವರು ತಿಳಿಸಿದ್ದಾರೆ. ಕಾಶ್ಮೀರ ಸಹೋದರರು, ಸಹೋದರಿಯರಿಗಾಗಿ ಬೆಂಬಲವನ್ನು ಪಾಕಿಸ್ತಾನ ನಿರಂತರವಾಗಿ ಮುಂದುವರೆಸಲಿದೆ ಎಂದು ಲೋಧಿ ಹೇಳಿದ್ದಾರೆ.