ಸಿರಿಯಾದ ಡಮಾಸ್ಕಸ್ ಹಾಗೂ ಸುತ್ತಮುತ್ತ ಪ್ರದೇಶದ ರಾಸಾಯನಿಕ ಶಸ್ತ್ರಾಸ್ತ್ರಗಳ ಸಂಗ್ರಹದ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಯುದ್ಧ ವಿಮಾನಗಳು ದಾಳಿ ಮಾಡಿದ್ದವು. ಸಿರಿಯಾದ ಸರ್ವಾಧಿಕಾರಿ ಅಸ್ಸಾದ್ ಗೆ ಸೇರಿದ ರಾಸಾಯನಿಕ ಶಸ್ತ್ರಾಸ್ತ್ರ ಸಂಗ್ರಹ ಮತ್ತು ತಯಾರಿಕಾ ಘಟಕಗಳನ್ನು ಗುರಿಯಾಗಿಸಿ ವೈಮಾನಿಕ ದಾಳಿ ನಡೆಸಲಾಗಿದೆ. ಈ ಮೂಲಕ ರಾಸಾಯನಿಕ ಶಸ್ತ್ರಾಸ್ತ್ರ ಉತ್ಪಾದನೆ, ಹರಡುವಿಕೆ ಮತ್ತು ಬಳಕೆಯನ್ನು ತಡೆಯುವ ಉದ್ದೇಶ ಅಮೆರಿಕದ್ದಾಗಿತ್ತು.