ನೇಪಾಳ: ಭಾರತೀಯ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟ

ನೇಪಾಳ ರಾಜಧಾನಿ ಕಠ್ಮಂಡುವಿನ ವಿರಾಟ್ ನಗರದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿರುವುದಾಗಿ ಮಂಗಳವಾರ ತಿಳಿದುಬಂದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನೇಪಾಳ; ನೇಪಾಳ ರಾಜಧಾನಿ ಕಠ್ಮಂಡುವಿನ ವಿರಾಟ್ ನಗರದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿರುವುದಾಗಿ ಮಂಗಳವಾರ ತಿಳಿದುಬಂದಿದೆ. 
ಸೋಮವಾರ ತಡರಾತ್ರಿ ಭಾರತೀಯ ರಾಯಭಾರಿ ಕಚೇರಿಯ ಸಮೀಪ ಬಾಂಬ್ ಸ್ಫೋಟಗೊಂಡಿದ್ದು, ಕಟ್ಟಡದ ಮುಂಭಾಗದಲ್ಲಿದ್ದ ಗೋಡೆ ಹಾನಿಗೊಂಡಿದೆ ಎಂದು ವರದಿಗಳು ತಿಳಿಸಿವೆ. 
ರಾಯಭಾರಿ ಕಚೇರಿ ಹಿಂಭಾಗದಲ್ಲಿದ್ದ ಸ್ಥಳದಲ್ಲಿ ಕಳೆದ ರಾತ್ರಿ ಬಾಂಬ್ ಸ್ಫೋಟಗೊಂಡಿದ್ದು, ಸ್ಥಳದಲ್ಲಿ ಗೋಡೆ ಹಾನಿಗೊಂಡಿದೆ ಎಂದು ಮೊರಂಗ್ ಎಸ್'ಪಿ ಅರುಣ್ ಕುಮಾರ್ ಬಿಸಿ ಹೇಳಿದ್ದಾರೆ. 
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಕೆಲ ಸ್ಥಳೀಯ ಗುಂಪುಗಳು ಸ್ಫೋಟಿಸಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. 
ನಿನ್ನೆಯಷ್ಟೇ ನೇಪಾಳದಲ್ಲಿರುವ ಪಕ್ಷವೊಂದು ಬಿರತ್ನಗರದಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು. ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿರುವ ಹಿನ್ನಯೆಲ್ಲಿ ಸ್ತಳದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಪ್ರಕರಣ ಸಂಬಂಧ ಇದೀಗ ಭಾರತೀಯ ಅಧಿಕಾರಿಗಳು ನೇಪಾಳ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com