ಕಾಬೂಲ್: ಆಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಮತದಾರ ನೋಂದಣಿ ಕೇಂದ್ರದ ಮೇಲೆ ಭಯೋತ್ಪಾದಕರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು ಪರಿಣಾಮ 31 ಮಂದಿ ಮೃತಪಟ್ಟಿದ್ದಾರೆ. .ಮುಂದಿನ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗಾಗಿ ಪೂರ್ವ ತಯಾರಿ ನಡೆಯುತ್ತಿದ್ದು ಈ ವೇಳೆ ಭಯೋತ್ಪಾದಕರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ. .ಈ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸ್ಥಳದಲ್ಲೇ 31 ಮಂದಿ ಮೃತಪಟ್ಟಿದ್ದು 54 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವಕ್ತಾರ ವಹೀದ್ ಹೇಳಿದ್ದಾರೆ..ಇಲ್ಲಿಯವರೆಗೂ ಯಾವುದೇ ಸಂಘಟನೆ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. .Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics